ಬಾಯಿ ಮಾತಿನಲ್ಲಿ ಸಂವಿಧಾನ ಒಪ್ಪಿಕೊಂಡರೆ ಸಾಲದು: ಅನಂತಕುಮಾರ್‌ ಹೆಗಡೆ

5:14 PM, Friday, January 26th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

Ananth-kumar-hegdeಬೆಂಗಳೂರು: ರಾಷ್ಟ್ರಧ್ವಜಕ್ಕೆ ಸೆಲ್ಯೂಟ್ ಹೊಡೆದು ಬಾಯಿ ಮಾತಿನಲ್ಲಿ ಸಂವಿಧಾನ ಒಪ್ಪಿಕೊಂಡರೆ ಸಾಲದು. ನಮ್ಮ ಸಂಸ್ಕೃತಿ, ಆಚಾರ-ವಿಚಾರಗಳನ್ನು ಒಪ್ಪಿಕೊಂಡಾಗ ಮಾತ್ರ ಸಂವಿಧಾನಕ್ಕೆ ಗೌರವ ನೀಡಿದಂತಾಗುತ್ತದೆ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಎದುರಾಳಿಗಳಿಗೆ ಟಾಂಗ್ ನೀಡಿದ್ದಾರೆ.

ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆದ 69ನೇ ಗಣರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಭಾಷಣದಲ್ಲಿ ವ್ಯಂಗ್ಯ ಮಿಶ್ರಿತವಾಗಿಯೇ ಕುಹಕವಾಡುತ್ತಿದ್ದರು. ನಾನು ಎಲ್ಲವನ್ನು ಹೇಳುವುದಕ್ಕೆ ಹೋದರೆ ಕೆಲವರು ಒಪ್ಪಿಕೊಳ್ಳುವುದಿಲ್ಲ. ಮೊದಲು ವಾಸ್ತವಿಕತೆಯನ್ನು ಅರ್ಥ ಮಾಡಿಕೊಳ್ಳಬೇಕು. ಎಲ್ಲವನ್ನು ಬಣ್ಣದ ಕನ್ನಡಕದಲ್ಲೆ ನೋಡುತ್ತಾರೆ ಎಂದು ತಿರುಗೇಟು ನೀಡಿದರು.

ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದೇ ನಮಗೆ ಸಿಕ್ಕ ಸ್ವಾತಂತ್ರ್ಯ ಎಂದು ಕೆಲವರು ಭಾವಿಸಿದ್ದಾರೆ. ಆದರೆ ಗುಲಾಮಗಿರಿ, ದಾಸ್ಯತನದಿಂದ ಹೊರಬಂದಿದ್ದೇ ನಿಜವಾದ ಸ್ವಾತಂತ್ರ್ಯ ಎಂದು ಅಭಿಪ್ರಾಯಪಟ್ಟರು.

ಸಂವಿಧಾನ ಒಪ್ಪಿಕೊಳ್ಳುವುದೇ ನಮ್ಮ ರಾಷ್ಟ್ರೀಯತೆನಾ ಎಂದು ಪ್ರಶ್ನಿಸಿದ ಅವರು, ವ್ಯವಸ್ಥೆಯನ್ನು ಒಪ್ಪಿಕೊಳ್ಳುವುದೇ ನಿಜವಾದ ಸಂವಿಧಾನ. ನಾವೆಲ್ಲರೂ ಭಾರತೀಯರು ಸಂವಿಧಾನವನ್ನು ಒಪ್ಪಿಕೊಂಡಿದ್ದೇವೆ. ನಮ್ಮ ಮಣ್ಣಿನ ಸಂಸ್ಕೃತಿಯನ್ನು ಎಲ್ಲರೂ ಗೌರವಿಸಿ ಪಾಲಿಸಬೇಕು. ಅದು ಬಿಜೆಪಿಯಲ್ಲಿ ಮಾತ್ರ ಕಾಣಲು ಸಾಧ್ಯ ಎಂದರು.

ನಮ್ಮ ಮಣ್ಣಿನ ಸಂಸ್ಕೃತಿಯನ್ನು ಯಾರು ಗೌರವಿಸುವುದಿಲ್ಲವೋ ಅಂಥವರು ಸಂವಿಧಾನದ ಬಗ್ಗೆ ಮಾತನಾಡುವುದೇ ವ್ಯರ್ಥ. ನಾನು ಏನೇ ಹೇಳಿದರೂ ಅದಕ್ಕೆ ವಿವಾದದ ಬಣ್ಣ ಕಟ್ಟುತ್ತಾರೆ. ಇದ್ದುದ್ದನ್ನು ಇದ್ದಂಗೆ ಹೇಳಿದರೆ ಕೆಲವರಿಗೆ ಆಗುವುದಿಲ್ಲ. ಆದರೆ ಕಂಡದ್ದನ್ನು ಕಾಣದಂತೆ ಹೇಳಬೇಕು. ಸುತ್ತಿ ಬಳಸಿ ಹೇಳುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English