ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೀಡ್ ಪ್ರಯಾಣ ತಂಡ ಭೇಟಿ

11:28 AM, Saturday, January 27th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

dharmastalaಮಂಗಳೂರು: ಜೀವನ ಮೌಲ್ಯಗಳನ್ನು ನೀಡುವಂತಹ ವಿದ್ಯೆಯು ಶಾಶ್ವತವಾಗಿ ಉಳಿಯಬಲ್ಲದು. ಪ್ರತಿಯೊಬ್ಬರು ದೇಶಪ್ರೇಮವನ್ನು ಹೃದಯದಲ್ಲಿಟ್ಟುಕೊಂಡು ಕರ್ತವ್ಯ ನಿರ್ವಹಿಸುವುದರಿಂದ ದೇಶದ ಅಭಿವೃದ್ಧಿ ಖಂಡಿತ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳೆಲ್ಲರೂ ದೇಶಪ್ರೇಮವನ್ನು ಬೆಳೆಸಿಕೊಳ್ಳಿರಿ. ಬೆಳೆಯುತ್ತಿರುವ ತಾಂತ್ರಿಕತೆ , ಆಧುನೀಕರಣತೆಗಳಲ್ಲಿ ಮಾನವ ಸಂಬಂಧಗಳು ದೂರಾಗುತ್ತಿವೆ.

ತಂತ್ರಜ್ಞಾನದ ಜೊತೆಗೆ ಹೃದಯ ಶ್ರೀಮಂತಿಕೆಯನ್ನು ಬೆಳೆಸಿಕೊಂಡು ಸಮಾಜಕ್ಕಾಗಿ ಬಾಳುವ ಸಂಸ್ಕೃತಿಯನ್ನು ಬೆಳೆಸಿಕೊಳ್ಳೋಣ” ಎಂಬುದಾಗಿ ಶ್ರೀ ಧರ್ಮಸ್ಥಳದ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ.ಯಶೋವರ್ಮರವರು ದೇಶ್‌ಪಾಂಡೆ ಫೌಂಡೇಶನ್ ವತಿಯಿಂದ ಲೀಡ್ ಪ್ರಯಾಣ ಕಾರ್ಯಕ್ರಮದಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ವಿವಿಧ ರಾಜ್ಯಗಳ ೧೨೫ ಮಂದಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಎಲ್.ಎಚ್.ಮಂಜುನಾಥ್‌ರವರು ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯವೈಖರಿ, ಕ್ಷೇತ್ರದ ಚರ್ತುದಾನಗಳ ಪರಂಪರೆ ಹಾಗೂ ವಿದ್ಯಾರ್ಥಿಗಳಲ್ಲಿ ನಾಯಕತ್ವ ಬೆಳೆಸಿಕೊಳ್ಳುವ ಬಗ್ಗೆ ವಿಶೇಷ ಮಾಹಿತಿ ನೀಡಿದರು. ಹಳ್ಳಿಗಳಿಂದ ಯುವಕರು ವಿಮುಖರಾಗುವುದರಿಂದ ಅಭಿವೃದ್ಧಿಯ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು. ಕೃಷಿ ಕ್ಷೇತ್ರ ಹಾಗೂ ಆರ್ಥಿಕ ಸಂಸ್ಕೃತಿಯ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕಿ ಶ್ರೀಮತಿ ಮಮತಾರಾವ್, ದೇಶ್‌ಪಾಂಡೆ ಫೌಂಡೇಶನ್‌ನ ಶ್ರೀ ಅಭಿನಂದನ್, ಗ್ರಾಮೀಣ ಶ್ರೇಷ್ಠತಾ ಕೇಂದ್ರದ ಯೋಜನಾಧಿಕಾರಿಯಾದ ಶ್ರೀಮತಿ ಜಯಂತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ತರಬೇತಿ ಕೇಂದ್ರದ ಶ್ರೀ ದೇವಪ್ಪ, ಶ್ರೀ ರಾಜೇಶ್, ಶ್ರೀಮತಿ ಜಯಶ್ರೀ, ಶ್ರೀಮತಿ ಚಂದ್ರಾವತಿ ಇವರು ಸಹಕರಿಸಿದರು.

ದೇಶ್‌ಪಾಂಡೆ ಫೌಂಡೇಶನ್ ವಿದ್ಯಾರ್ಥಿಗಳ ವೃತ್ತಿಪರ ಕೌಶಲ್ಯವನ್ನು ಹೆಚ್ಚಿಸುವ ದೃಷ್ಠಿಯಿಂದ ಪ್ರತಿವರ್ಷವೂ ಈ ಕಾರ್ಯಕ್ರಮವನ್ನು ಆಯೋಜಿಸುತ್ತದೆ. ಲೀಡ್ ಪ್ರಯಾಣ ತಂಡವು ದಿನಾಂಕ 24.01.18 ಹಾಗೂ ದಿನಾಂಕ.26.01.18ವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದೇವಳ ಹಾಗೂ ಪ್ರೇಕ್ಷಣಿಯ ಸ್ಥಳಗಳು, ಸಿರಿ ಗ್ರಾಮೋದ್ಯೋಗ ಸಂಸ್ಥೆ, ರುಡ್‌ಸೆಟ್, ಕೃಷಿ ತಾಕುಗಳ ಭೇಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು, ಜನಜಾಗೃತಿ ವೇದಿಕೆ ಭೇಟಿ, ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಸಲ್ಪಡುವ ಸಮಾಜಮುಖಿ ಕಾರ್ಯಕ್ರಮಗಳ ಅಧ್ಯಯನವನ್ನು ಮಾಡಿರುತ್ತಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಸುತ್ತಲಿನ ಪರಿಸರದಲ್ಲಿ ವಿದ್ಯಾರ್ಥಿಗಳಿಂದ ನಗದು ರಹಿತ ವ್ಯವಹಾರ ಹಾಗೂ BHIM APP ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English