ಮಂಗಳೂರು: ಪೂರ್ಣ ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳ ದೇವಸ್ಥಾನದಲ್ಲಿ ದೇವರ ದರ್ಶನದಲ್ಲಿ ಸಮಯ ಬದಲಾವಣೆ ಮಾಡಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಬೆಳಗ್ಗೆ 6.30ರಿಂದ 9 ಗಂಟೆಯವರೆಗೆ ಪೂಜೆಗೆ ಅವಕಾಶ ಕಲ್ಪಿಸಲಾಗಿತ್ತು. ಬೆಳಗ್ಗೆ 9ರಿಂದ ರಾತ್ರಿ 8.30ರವರೆಗೆ ದೇವಸ್ಥಾನದ ಬಾಗಿಲು ಮುಚ್ಚಿರುತ್ತದೆ. ಸಾಮಾನ್ಯವಾಗಿ ನಡೆಯುವ ಮಧ್ಯಾಹ್ನದ ಪೂಜೆಯೂ ಗ್ರಹಣದಿಂದಾಗಿ ಬೆಳಗ್ಗೆಯೇ ದೇವರಿಗೆ ಸಮರ್ಪಣೆಗೊಂಡಿದೆ.
ಧರ್ಮಸ್ಥಳದಲ್ಲೂ ಮಧ್ಯಾಹ್ನ 2.30ರಿಂದ ರಾತ್ರಿ 9 ಗಂಟೆಯವರೆಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ. ರಾತ್ರಿ 9.30ರಿಂದ 10.30ರವರೆಗೆ ಸಾರ್ವಜನಿಕರು ದೇವರ ದರ್ಶನ ಪಡೆಯಬದಹುದಾಗಿದೆ.
ಮಂಗಳೂರಿನ ಕದ್ರಿ ಮಂಜುನಾಥ, ಮಂಗಳಾದೇವಿ ಹಾಗೂ ಕುದ್ರೋಳಿ ದೇವಸ್ಥಾನಗಳಲ್ಲಿ ಮಧ್ಯಾಹ್ನದ ಪೂಜೆಯಿದ್ದು, ಬಳಿಕ ರಾತ್ರಿ 9 ಗಂಟೆಯ ನಂತರ ಪೂಜೆ ನಡೆಯಲಿದೆ. ಈ ಸಮಯದಲ್ಲಿ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ ಎಂದು ದೇವಸ್ಥಾನಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Click this button or press Ctrl+G to toggle between Kannada and English