ಮಂಗಳೂರು ವಿಮಾನ ನಿಲ್ದಾಣದಲ್ಲಿ 39 ಲಕ್ಷ ರೂ. ಮೌಲ್ಯದ ಚಿನ್ನ ವಶ

10:26 AM, Thursday, February 1st, 2018
Share
1 Star2 Stars3 Stars4 Stars5 Stars
(5 rating, 1 votes)
Loading...

airportಮಂಗಳೂರು: ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ)ದ ಅಧಿಕಾರಿಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 39 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ ಪಡೆದು, ಅಕ್ರಮವಾಗಿ ಸಾಗಿಸಲೆತ್ನಿಸಿದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಬಂಧಿತನನ್ನು ಕಾಸರಗೋಡಿನ ಅಹಮದ್ ನಬೀಳ್ ಗಫೂರ್ (21) ಎಂದು ಗುರುತಿಸಲಾಗಿದೆ. ಈತ ದುಬೈನಿಂದ ಸ್ಪೈಸ್‌ಜೆಟ್ ವಿಮಾನ ಮೂಲಕ ಬಂದಿದ್ದು, ತಪಾಸಣೆ ವೇಳೆ ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿರುವುದು ಪತ್ತೆಯಾಗಿದೆ.

ಈತ ಮೊಬೈಲ್ ಕವರ್‌ನೊಳಗೆ ಚಿನ್ನವನ್ನು ಅಡಗಿಸಿಟ್ಟು ಪ್ಯಾಂಟಿನ ಜೇಬಿನಲ್ಲಿರಿಸಿ ಸಾಗಿಸಲು ಯತ್ನಿಸಿದ್ದ. 1.282 ಗ್ರಾಂ ತೂಕ ಇರುವ ಚಿನ್ನದ ಒಟ್ಟು 11 ಬಾರ್‌ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಇದರ ಮೌಲ್ಯ 39 ಲಕ್ಷ ರೂ. ಆಗಿದೆ. ನಬೀಲ್ ತನಿಖೆ ನಡೆಯುತ್ತಿದೆ ಎಂದು ಡಿಆರ್‌ಐ ನಿರ್ದೇಶಕ ವಿನಾಯಕ ಭಟ್ ತಿಳಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English