ಮಂಗಳೂರು: ಕೊಲೆ ಯತ್ನ, ಅಪಹರಣ ಸೇರಿದಂತೆ ಒಟ್ಟು 13 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯೋರ್ವನನ್ನು ಇಲ್ಲಿನ ದಕ್ಷಿಣ ರೌಡಿ ನಿಗ್ರಹದಳ ಅಧಿಕಾರಿ ಮತ್ತು ರೌಡಿ ನಿಗ್ರಹದಳದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಕಾಸರಗೊಡು ಜಿಲ್ಲೆಯ ಉಪ್ಪಳ ನಿವಾಸಿ ಮಹಮ್ಮದ್ ರಪೀಕ್ ಯಾನೆ ನಪ್ಪಾಟೆ ರಪೀಕ್(29) ಬಂಧಿತ ಆರೋಪಿ. ಮಂಗಳೂರು ದಕ್ಷಿಣ ಉಪ ವಿಭಾಗದ ರೌಡಿ ನಿಗ್ರಹದಳದ ಸಹಾಯಕ ಪೊಲೀಸ್ ಆಯುಕ್ತರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಈ ಆರೋಪಿಯನ್ನು ಕೆಸಿ ರೋಡ್ನಲ್ಲಿ ಬಂಧಿಸಲಾಗಿದೆ.
ಈತನ ಮೇಲೆ ಮಹಿಳೆಯೋರ್ವಳಿಗೆ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ, ಮೂರು ಕೊಲೆ ಪ್ರಕರಣ ಹಾಗೂ ಕೊಲೆ ಯತ್ನ, ಕಿಡ್ನಾಪ್ ಸೇರಿದಂತೆ ಒಟ್ಟು 13 ಪ್ರಕರಣಗಳು ದಾಖಲಾಗಿದೆ. ಈತನ ವಿರುದ್ಧ ಪುತ್ತೂರು ನಗರ ಹಾಗೂ ಪುತ್ತೂರು ಗ್ರಾಮಂತರ ಠಾಣೆಯಲ್ಲಿ ದಸ್ತಗಿರಿ ವಾರೆಂಟ್ ಬಾಕಿ ಇದ್ದು, ನ್ಯಾಯಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ.
Click this button or press Ctrl+G to toggle between Kannada and English