ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ 2 ಕೋ.ರೂ. ಮೊತ್ತದ ಕಾಮಗಾರಿಗೆ ಚಾಲನೆ

5:25 PM, Saturday, February 3rd, 2018
Share
1 Star2 Stars3 Stars4 Stars5 Stars
(5 rating, 1 votes)
Loading...

ramanath-raiಬಂಟ್ವಾಳ: ಮುಖ್ಯಮಂತ್ರಿಗಳ ಸಣ್ಣ ಮತ್ತು ಮಧ್ಯಮ ಪಟ್ಟಣಗಳ ಅಭಿವೃದ್ಧಿ ನಗರೋತ್ಥಾನ-3 ಮತ್ತು ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಯಡಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ವಿವಿಧ ಪ್ರದೇಶಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ಶನಿವಾರ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ನಗರೋತ್ಥಾನ 2ನೇ ಹಂತ ಹಾಗೂ ಇತರ ಅನುದಾನ ಸೇರಿ ಒಟ್ಟು ಸುಮಾರು 20.48 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇವುಗಳಲ್ಲಿ 338 ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗತ್ತಿದೆ ಎಂದರು.

ಪುರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಈಗಾಗಲೇ ಜಕ್ರಿಬೆಟ್ಟುವಿನಲ್ಲಿ 2ನೇ ಹಂತದ ಸಮಗ್ರ ಕುಡಿಯುವ ನೀರಿನ ಯೋಜನೆಯನ್ನು 52.79 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗಿದೆ ಮಾರ್ಚ್‌ನಲ್ಲಿ ಪುರವಾಸಿಗಳಿಗೆ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು. ಹಾಗೆಯೇ ತ್ಯಾಜ್ಯ ನೀರು ನೇತ್ರಾವತಿ ನದಿ ಸೇರದಂತೆ 2ನೇ ಹಂತದ ಒಳಚರಂಡಿ ಯೋಜನೆಗೆ 56.54 ಕೋಟಿ ರೂ. ಅನುದಾನ ಮಂಜೂರಾತಿ ದೊರಕಿದ್ದು, ಶೀಘ್ರವೇ ಇದರ ಕಾಮಗಾರಿಯನ್ನು ಕೈಗೆತ್ತಿಗೊಳ್ಳಲಾಗುವುದು. ಪುರಸಭೆಯನ್ನು ನಗರ ಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ವಿವರಿಸಿದರು.

ramanath-rai-2ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಿ. ಮೂಡ ಗ್ರಾಮದ ಪಲ್ಲಮಜಲು ಕಲ್ಲಗುಡ್ಡೆ ರಸ್ತೆ ಅಭಿವೃದ್ಧಿ, ಪಲ್ಲಮಜಲು ಮುಖ್ಯರಸ್ತೆ ಅಭಿವೃದ್ಧಿ, ಕಾಮೆರೆಕೋಡಿ ಮೊಡಂಕಾಪು ಮುಖ್ಯ ರಸ್ತೆ, ಗಾಂದೋಡಿ, ಕೈಕಂಬ, ಪರ್ಲಿಯಾ ಮಸೀದಿ ರಸ್ತೆ, ಅಲೆತ್ತೂರು ದೈವಸ್ಥಾನ ರಸ್ತೆ, ಬಿ.ಸಿ.ರೋಡಿನ ಬಸ್ ನಿಲ್ದಾಣದ ಹಿಂಭಾಗ, ಕಾಮಾಜೆ ರಸ್ತೆ, ಪಾಣೆಮಂಗಳೂರಿನ ಕಸ್ಬಾ ಗ್ರಾಮದ ಗೂಡಿನಬಳಿ ಟ್ಯಾಂಕ್ ರಸ್ತೆ, ಜೈನರಪೇಟೆ ಮಸೀದಿ ರಸ್ತೆ, ಎಂ.ಎಚ್. ಪಕ್ಕದ ರಸ್ತೆ, ಬೋಗೋಡಿ, ಶಾಂತಿಗುಡ್ಡೆ, ಸುರುಳಿಗುಡ್ಡೆ ಪ್ರದೇಶದ ಸುಮಾರು 15 ಕಡೆಗಳಲ್ಲಿ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ ನೆರವೇರಿಸಲಾಯಿತು.

ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಸ್ಥಾಯಿ ಸಮಿತಿಯ ಅಧ್ಯಕ್ಷ ವಾಸು ಪೂಜಾರಿ, ಸದಸ್ಯರಾದ ಯಾಸ್ಮೀನ್, ಮುಮ್ತಾಝ್ ಬಿ.ಸಿ.ಲತೀಫ್, ಇಕ್ಬಾಲ್ ಗೂಡಿನಬಳಿ, ಬಿ.ಮೋಹನ್, ಚಂಚಲಾಕ್ಷಿ, ಪ್ರಭಾ ಆರ್. ಸಾಲ್ಯಾನ್, ಜಗದೀಶ್ ಕುಂದರ್, ಭಾಸ್ಕರ್ ಟೈಲರ್, ಶರೀಫ್ ಶಾಂತಿಯಂಗಡಿ, ಜೆಸಿಂತಾ, ಸಂಧ್ಯಾ, ಪ್ರವೀಣ್ ಬಿ., ಮೆಸ್ಕಾಂ ಸಲಹಾ ಸಮಿತಿ ಸದಸ್ಯ ವೆಂಕಪ್ಪಪೂಜಾರಿ, ನಾಮನಿರ್ದೇಶನ ಸದಸ್ಯ ಲೋಲಾಕ್ಷ, ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ, ಇಂಜಿನಿಯರ್ ಡೊಮೆನಿಕ್ ಡಿಮೆಲ್ಲೊ ಮತ್ತಿತರರು ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English