ಮಂಗಳೂರು: ನಿರುದ್ಯೋಗಿ ಯುವಜನತೆಗೆ ನೆರವಾಗಲು ಫೆ.17ರಂದು ಮಂಗಳೂರು ವಿಶ್ವವಿದ್ಯಾಲಯದಲ್ಲಿ ದಿಶಾ ಉದ್ಯೋಗ ಪರ್ವ 2018ನ್ನು ಆಯೋಜಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಶಶಿಕಾಂಥ್ ಸೆಂಥಿಲ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರ, ದ.ಕ ಜಿಲ್ಲಾಡಳಿತ, ಸಿ.ಇ.ಒ.ಎಲ್ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದ್ರೆ ಸಹಭಾಗಿತ್ವದಲ್ಲಿ ಈ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಡಿಗ್ರಿ, ಸ್ನಾತಕೋತ್ತರ ಪದವಿಯಲ್ಲಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ಈ ಮೇಳದಲ್ಲಿ ಭಾಗವಹಿಸಬಹುದು. ಇಂಜಿನಿಯರಿಂಗ್ ಹಾಗೂ ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸುವಂತಿಲ್ಲ ಎಂದರು.
ಸುಮಾರು 150ಕ್ಕೂ ಹೆಚ್ಚು ಕಂಪೆನಿಗಳು ಇದರಲ್ಲಿ ಭಾಗವಹಿಸುತ್ತಿದ್ದು, ಈಗಾಗಲೇ 66 ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲು ನೋಂದಣಿ ಮಾಡಿಕೊಂಡಿದೆ. ಉದ್ಯೋಗ ಮೇಳದ ಕುರಿತಾಗಿ ಫೆ.10ರಂದು ಅಭ್ಯರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮವನ್ನು ಕದ್ರಿಯ ಪಾಲಿಟೆಕ್ನಿಕಲ್‌ನಲ್ಲಿ ಆಯೋಜಿಸಲಾಗಿದೆ ಎಂದು ಅವರು ಹೇಳಿದರು.
Click this button or press Ctrl+G to toggle between Kannada and English