- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಬೈಕ್‌ಗೆ ಡಿಕ್ಕಿ ಹೊಡೆದ ಕಾರು: ನವದಂಪತಿ ಸ್ಥಳದಲ್ಲೇ ಸಾವು

accident [1]ಹಾವೇರಿ: ಚಲಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕದ ರಮಂಡಲಗಿ ಕ್ರಾಸ್ ಬಳಿ ನಡೆದಿದೆ.

ಶಿವಲಿಂಗಪ್ಪ ಭಜ್ಜಿ (28) ಮತ್ತು ಜ್ಯೋತಿ ಭಜ್ಜಿ (25) ಎಂಬುವವರೆ ಮೃತ ದಂಪತಿ. ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ನಡೆದಿದೆ.

ಕಳೆದ ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ದಂಪತಿ ನೂಕಾಪುರ ಗ್ರಾಮದ ಕಡೆಯಿಂದ ರಾಣೇಬೆನ್ನೂರು ನಗರದತ್ತ ಬೈಕ್‌ನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ. ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲೇ ಕಾರು ಬಿಟ್ಟು ಕಾರು ಚಾಲಕ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.