ಮಂಗಳೂರು: ಮಾಜಿ ಮೇಯರ್ ಕೆ. ಅಶ್ರಫ್ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ.
ಅಶ್ರಫ್ ಕಾಂಗ್ರೆಸ್‌ನ ಸಕ್ರಿಯ ಮುಖಂಡರಾಗಿದ್ದವರು. ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರ ಬೆಂಬಗಲಿರಾಗಿದ್ದ ಅಶ್ರಫ್, ಬಳಿಕ ಪೂಜಾರಿ ವಿರುದ್ಧವೇ ತಮ್ಮ ಅಸಮಾಧಾನ ಹೊರಹಾಕಿದ್ದರು. ನಂತರ ಕಾಂಗ್ರೆಸ್ ಪಕ್ಷದ ಕಾರ್ಯ ಚಟುವಟಿಕೆಗಳಿಂದಲೇ ದೂರ ಉಳಿದಿದ್ದರು. ಇತ್ತೀಚೆಗೆ ಮತ್ತೆ ಪಕ್ಷದಲ್ಲಿ ಸಕ್ರಿಯರಾಗಿದ್ದ ಅಶ್ರಫ್ ಅವರನ್ನು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು.
ಕಾಂಗ್ರೆಸ್ ಸರ್ಕಾರ ಮುಸ್ಲಿಂ ಸಮುದಾಯಕ್ಕೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ಅಶ್ರಫ್, ಮಾಜಿ ಸಿಎಂ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಮಾತುಕತೆ ಕೂಡಾ ನಡೆಸಿದ್ದರು. ಇದರಿಂದ ಅಶ್ರಫ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಇದೀಗ ಅವರ ರಾಜೀನಾಮೆಯಿಂದ ಅದಕ್ಕೆ ಪುಷ್ಟಿ ಸಿಕ್ಕಿದೆ.
Click this button or press Ctrl+G to toggle between Kannada and English