ಚುನಾವಣಾ ಸಿದ್ಧತೆ: ಅನಧಿಕೃತ ಬ್ಯಾನರ್ ತೆರವುಗೊಳಿಸುವಂತೆ ಎಚ್ಚರಿಕೆ

10:04 AM, Saturday, February 10th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

sureshಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವ ತಯಾರಿ ಹಾಗೂ ಭದ್ರತೆ ದೃಷ್ಟಿಯಿಂದ ನಗರದಲ್ಲಿ ಅನಧಿಕೃತವಾಗಿರುವ ಬ್ಯಾನರ್‌‌ಗಳನ್ನು ತೆರವುಗೊಳಿಸಲು ದ.ಕ. ಜಿಲ್ಲಾಧಿಕಾರಿ ಡಾ. ಶಶಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ.

ತಮ್ಮ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಚುನಾವಣಾ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಇನ್ನೆರಡು ತಿಂಗಳು ಜಿಲ್ಲೆಯ ವಿವಿಧ ಕಡೆಯಲ್ಲಿ ನಡೆಯುವ ಕಾರ್ಯಕ್ರಮಗಳು, ಉತ್ಸವಗಳಿಗೆ ಸಂಬಂಧಪಟ್ಟ ಅಧಿಕಾರಿಗಳ ಅನುಮತಿಯನ್ನು ಪಡೆದು ಬಂಟಿಂಗ್ಸ್‌ಗಳನ್ನು ಹಾಕಲು ಸೂಚನೆ ನೀಡಿದ್ದಾರೆ. ಅನುಮತಿ ಪಡೆಯದೇ ಇರುವವರ ವಿರುದ್ಧ ಕ್ರಮ ಕೈಗೊಳ್ಳಲು ಹಾಗೂ ಅಂತಹ ಬ್ಯಾನರ್‌ಗಳನ್ನು ಮತ್ತು ಅವಧಿ ಮೀರಿದ ಬ್ಯಾನರ್‌ಗಳನ್ನು ಮುಲಾಜಿಲ್ಲದೇ ತೆರವುಗೊಳಿಸಲು ತಾಕೀತು ಮಾಡಿದ್ದಾರೆ.

ಚುನಾವಣೆಯ ಸಂದರ್ಭ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದ್ದು, ಚುನಾವಣಾ ದಿನಾಂಕ ಪ್ರಕಟವಾಗುವ ಮುಂಚೆ ಎಲ್ಲಾ ಅನಧಿಕೃತ ಬ್ಯಾರ್‌ಗಳನ್ನು ತೆರವುಗೊಳಿಸಿ ಶಾಂತಿಯುತವಾಗಿ ಚುನಾವಣೆಯನ್ನು ನಡೆಸಲು ತೀರ್ಮಾನಿಸಲಾಗಿದೆ.

ಅಲ್ಲದೇ ಈ ವರ್ಷವೂ ವಿದ್ಯುನ್ಮಾನ ಮತಯಂತ್ರಗಳ ಮೂಲಕ ಮತದಾನ ನಡೆಯಲಿದ್ದು, ಇದಕ್ಕೆ ಪೂರಕವಾಗಿ ವಿವಿ ಪ್ಯಾಟ್‌ಗಳನ್ನು ಬಳಸಲಾತ್ತಿದೆ. ಇದರಲ್ಲಿ ಯಾವುದೇ ಲೋಪದೋಷಗಳು ನಡೆಯದಂತೆ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಲು ಸಹಕರಿಸಬೇಕೆಂದು ಜಿಲ್ಲೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮತ ಎಣಿಕೆ ಗೊಂದಲ ಮಾಡಿದರೆ ಈ ಮುದ್ರಣವನ್ನು ಮತ್ತೊಮ್ಮೆ ಎಣಿಕೆ ಮಾಡಲು ಅವಕಾಶವಿದ್ದು, ಇಲ್ಲಿ ಗೊಂದಲಕ್ಕೆ ಅವಕಾಶವಿರುವುದಿಲ್ಲ. ಒಂದು ವೇಳೆ ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸಿದರೆ ಹಾಗೂ ಕರ್ತವ್ಯ ವೇಳೆಯಲ್ಲಿ ಮೊಬೈಲ್ ಫೋನ್‌ಗಳನ್ನು ಬಳಸಿದ್ದು ಕಂಡುಬಂದಲ್ಲಿ ಅಂಥಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸಭೆಯಲ್ಲಿ ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಎಂ.ಆರ್.ರವಿ, ಅಪರ ಜಿಲ್ಲಾಧಿಕಾರಿ ಕುಮಾರ್, ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್, ಮಹಾನಗರ ಪಾಲಿಕೆ ಆಯುಕ್ತ ಮಹಮ್ಮದ್ ನಝೀರ್, ಸಹಾಯಕ ಆಯುಕ್ತ ರೇಣುಕಾಪ್ರಸಾದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English