ಬೆಂಗಳೂರು: ದೇಶದ ಆರನೇ ಶ್ರೀಮಂತ ಮುಖ್ಯಮಂತ್ರಿ ಎನ್ನುವ ಸರ್ವೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಟ್ವಿಟರ್‌ನಲ್ಲಿ ಅದರ ಕುರಿತು ಮಾಹಿತಿ ಹೊರಹಾಕಿದ್ದಾರೆ.
ಸರ್ವೆಯಲ್ಲಿ ಹೇಳಿರುವುದು ಅವಿಭಕ್ತ ಕುಟುಂಬದ ಆಸ್ತಿಯ ಲೆಕ್ಕ. ಕಳೆದ ಚುನಾವಣೆಯಲ್ಲಿ ಅವಿಭಕ್ತ ಕುಟುಂಬದ ಒಟ್ಟು ಆಸ್ತಿಯನ್ನು ಘೋಷಿಸಿದ್ದೆ. ಅಣ್ಣ, ತಮ್ಮಂದಿರ ಎಲ್ಲಾ ಆಸ್ತಿಯನ್ನ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿತ್ತು. ನನ್ನ ಅಣ್ಣ ತೀರಿ ಹೋದ ಮೇಲೆ, ನಾನೇ ಮನೆಯ ಯಜನಮಾನನಾಗಿದ್ದೆ. ಈಗ ಕುಟುಂಬದ ಆಸ್ತಿಯನ್ನ ವಿಭಜಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಜತೆಗೆ ನನ್ನ ನಿಜವಾದ ಆಸ್ತಿ ರಾಜ್ಯದ ಆರೂವರೆ ಕೋಟಿ ಜನರ ಆಶೀರ್ವಾದ ಎಂದಿದ್ದಾರೆ.
ಖಾಸಗಿ ಸಂಸ್ಥೆಯೊಂದು ನನ್ನ ಆಸ್ತಿ ವಿವರವನ್ನು ನೀಡಿದೆ. ಅದು ಕಳೆದ ಚುನಾವಣೆಯ ಕಾಲದಲ್ಲಿ ಘೋಷಿಸಿದ್ದ ಅವಿಭಕ್ತ ಕುಟುಂಬದ ಒಟ್ಟು ಆಸ್ತಿ ವಿವರ.ನನ್ನ ನಿಜವಾದ ಆಸ್ತಿ ರಾಜ್ಯದ ಆರುವರೆ ಕೋಟಿ ಜನರ ಆಶೀರ್ವಾದ.
ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್ ಸಂಸ್ಥೆ ಭಾರತದ 35 ಮುಖ್ಯಮಂತ್ರಿಗಳಲ್ಲಿ 25 ಜನ ಕೋಟ್ಯಾಧಿಪತಿಗಳಾಗಿದ್ದಾರೆ ಎಂಬ ವರದಿಯನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ಸಿಎಂ ಸಿದ್ದರಾಮಯ್ಯ 13.61 ಕೋಟಿ ರೂ. ಆಸ್ತಿ ಹೊಂದಿದ್ದು, ದೇಶದ ಮುಖ್ಯಮಂತ್ರಿಗಳ ಶ್ರೀಮಂತಿಕೆಯಲ್ಲಿ 6ನೇ ಸ್ಥಾನದಲ್ಲಿದ್ದಾರೆ ಎಂಬ ಮಾಹಿತಿಯನ್ನು ಪ್ರಕಟಿಸಿತ್ತು.
Click this button or press Ctrl+G to toggle between Kannada and English