- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಬಂಟ್ವಾಳದ ಬಳಿ ಕಾರ್ – ಬೈಕ್ ಮುಖಾಮುಖಿ ಡಿಕ್ಕಿ… ಇಬ್ಬರ ಸ್ಥಿತಿ ಗಂಭೀರ

bantwal [1]ಮಂಗಳೂರು: ಕಾರು-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡದ ಬಂಟ್ವಾಳದ ಬಳಿ ನಡೆದಿದೆ.

ಬಂಟ್ವಾಳದ ಮೆಲ್ಕಾರ್‌ ಸೇತುವೆ ಬಳಿ ಈ ಘಟನೆ ನಡೆದಿದೆ. ಘಟನೆಯಿಂದ ಬೈಕ್‌ ಸವಾರರಿಬ್ಬರಿಗೂ ಗಂಭೀರ ಗಾಯಗಳಾಗಿವೆ. ಇನ್ನು ಬೈಕ್‌ಗೆ ಡಿಕ್ಕಿ ಹೊಡೆದ ಕಾರು ಬಳಿಕ ಕಂದಕಕ್ಕೆ ಉರುಳಿದೆ. ಅದೃಷ್ಟವಶಾತ್‌ ಕಾರಿನಲ್ಲಿ ಚಾಲಕನೊಬ್ಬನೇ ಇದ್ದು, ಆತನಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತದೆ. ಘಟನೆ ಬಂಟ್ವಾಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.