ಮೊದಲು ಕನ್ನಡದಲ್ಲಿ ಸರಿಯಾಗಿ ಬರೆಯುವ ಯೋಗ್ಯತೆಯನ್ನು ಪಡೆಯಬೇಕು: ಅನಂತ್‌‌ಕುಮಾರ್ ಹೆಗಡೆ

1:57 PM, Monday, February 19th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

ananth-kumar-hegdeಮಂಗಳೂರು: ಕನ್ನಡದ ಪರವಾಗಿ ಹೋರಾಟ ಮಾಡುವ ಮೊದಲು ಕನ್ನಡದಲ್ಲಿ ಸರಿಯಾಗಿ ಬರೆಯುವ ಯೋಗ್ಯತೆಯನ್ನು ಪಡೆಯಬೇಕು ಎಂದು ಕೇಂದ್ರ ಸಚಿವ ಅನಂತ್‌‌ಕುಮಾರ್ ಹೆಗಡೆ ಹೇಳಿದ್ದಾರೆ.

ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್‌‌ನಲ್ಲಿ ನಡೆದ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಇಂಗ್ಲೀಷ್ ಹಾವಳಿ ಹೆಚ್ಚುತ್ತಿದೆ ಎನ್ನುವ ಹೋರಾಟಗಳು ನಿರಂತರವಾಗಿ ನಡೆಯುತ್ತಿದೆ. ಆದರೆ, ಹೀಗೆ ಹೋರಾಟ ಮಾಡುವ, ಒದರುವ ನಾವೇ ಸರಿಯಾಗಿ ಕನ್ನಡ ಬರೆಯುವ ಯೋಗ್ಯತೆಯನ್ನು ಕಳೆದುಕೊಂಡಿದ್ದೇವೆ. ಇಂದು ಕನ್ನಡವನ್ನು ಇಂಗ್ಲಿಷ್‌ಗೆ ತರ್ಜುಮೆ ಮಾಡುವ ಬದಲು ಇಂಗ್ಲಿಷ್‌‌ನ್ನು ಕನ್ನಡಕ್ಕೆ ತರ್ಜುಮೆ ಮಾಡುವಂತಹ ಸ್ಥಿತಿ ನಿರ್ಮಾಣಗೊಂಡಿದೆ ಎಂದು ಹೇಳಿದರು.

ಕೇವಲ ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಉತ್ತರ ಕನ್ನಡದಂತಹ ಹಳ್ಳಿ ಶಾಲೆಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದವರು ಮಾತ್ರ ಕನ್ನಡ ಸ್ಪಷ್ಟವಾಗಿ ಮಾತನಾಡಬಲ್ಲರು. ಶುದ್ಧ ಕನ್ನಡ ಮಾತನಾಡುವುದಕ್ಕೂ ಇಂದು ಅವಕಾಶವೇ ಇಲ್ಲ. ಶುದ್ಧ ಕನ್ನಡದಲ್ಲಿ ಮಾತನಾಡಿದಲ್ಲಿ ಅನೇಕರಿಗೆ ಅರ್ಥವೇ ಆಗುವುದು ಕಷ್ಟ ಎಂದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English