ಮಂಗಳೂರು: ಮೂರು ದಿನಗಳ ರಾಜ್ಯದ ಕರಾವಳಿ ಭಾಗದಲ್ಲಿ ಪ್ರವಾಸ ಕೈಗೊಂಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕಳೆದ ರಾತ್ರಿ ಆಗಮಿಸಿ ಅಲ್ಲಿನ ಗೆಸ್ಟ್ ಹೌಸ್ನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಆದಿಶೇಷ ಗೆಸ್ಟ್ ಹೌಸ್ನಲ್ಲಿ ವಾಸ್ತವ್ಯ ಹೂಡಿರುವ ಅಮಿತ್ ಶಾ ಆರೋಗ್ಯದಲ್ಲಿ ಕಳೆದ ರಾತ್ರಿ ಏರುಪೇರಾಗಿತ್ತು. ಶಾ ಜ್ವರದಿಂದ ಬಳಲುತ್ತಿದ್ದು, ವೈದ್ಯರು ತಪಾಸಣೆ ಮಾಡಿದ್ದಾರೆ. ಇಂದಿನ ಕಾರ್ಯಕ್ರಮಗಳಲ್ಲಿ ಕುಳಿತು ಮಾತನಾಡುವಂತೆ ಶಾಗೆ ವೈದ್ಯರು ಸಲಹೆ ನೀಡಿದ್ದಾರೆ.
ಕಳೆದ ರಾತ್ರಿ ಅಮಿತ್ ಶಾಗೆ ಉತ್ತರ ಭಾರತ ಶೈಲಿಯ ಊಟ ತಯಾರಿಸಲಾಗಿತ್ತು. ಇಂದು ಬೆಳಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್, ಸಂಸದ ನಳೀನ್ ಕಟೀಲ್, ಸ್ಥಳೀಯ ಶಾಸಕ ಅಂಗಾರ ಸೇರಿದಂತೆ ಹಲವರು ಅಮಿತ್ ಶಾ ಅವರನ್ನು ಸ್ವಾಗತಿಸಿದರು.
Click this button or press Ctrl+G to toggle between Kannada and English