ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ: ಅಮಿತ್ ಶಾ

11:58 AM, Tuesday, February 20th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

janata-partyಸುಬ್ರಹ್ಮಣ್ಯ: ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಈ ಗೆಲುವು ದಕ್ಷಿಣ ಭಾರತದಲ್ಲಿ ಪಕ್ಷದ ಗೆಲುವಿಗೆ ಹೆಬ್ಬಾಗಿಲು ಆಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದದಲ್ಲಿ ಬಿಜೆಪಿ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಆಶ್ರಯದಲ್ಲಿ ಸೋಮವಾರ ಆಯೋಜಿಸಲಾಗಿರುವ ನವ ಕರ್ನಾಟಕ ನಿರ್ಮಾಣಕ್ಕಾಗಿ ‘ನವಶಕ್ತಿ ಸಮಾವೇಶ’ವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದ ಅವರು, ಸಿದ್ದರಾಮಯ್ಯ ಸರಕಾರದಲ್ಲಿ ಭ್ರಷ್ಟಾಚಾರಿಗಳಿದ್ದಾರೆ ಎಂದು ಆರೋಪಿಸಿದರು. ಶಾಸಕ ಹಾರಿಸ್ ಪುತ್ರನ ಗೂಂಡಾವರ್ತನೆಯನ್ನು ಪ್ರಸ್ತಾಪಿಸಿದ ಅಮಿತ್ ಶಾ, ಇದು ಸರಕಾರದ ತುಷ್ಟೀಕರಣಕ್ಕೆ ನೀತಿಗೆ ಉದಾಹರಣ ಎಂದರು.

ಮತ್ತೆ ಕೇಂದ್ರ ಸರಕಾರ ಕರ್ನಾಟಕಕ್ಕೆ ನೀಡಿರುವ ಅನುದಾನದ ಲೆಕ್ಕ ಕೇಳಿದ ಅಮಿತ್ ಶಾ, ಕೇಂದ್ರ ಸರಕಾರ ಏನು ಮಾಡಿದೆ ಎಂದು ಸಿದ್ದರಾಮಯ್ಯ ಪ್ರಶ್ನಿಸುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಸರಕಾರ ಏನು ಮಾಡಿದೆ ಎಂದು ಪ್ರಶ್ನಿಸುವ ಕಾಲ ಬಂದಿದೆ ಎಂದರು.

ವೇದಿಕೆಯಲ್ಲಿ ಸಂಸದ ನಳಿನ್ ಕುಮಾರ್, ಶಾಸಕರಾದ ಎಸ್.ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಮೊದಲಾದವರು ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English