ಮಂಗಳೂರು: ಯೋಗಕ್ಕೆ ಇಂದು ಭಾರತವಲ್ಲದೇ ವಿಶ್ವದ ಬೇರೆ ಬೇರೆ ದೇಶಗಳಲ್ಲೂ ವಿಶೇಷ ಗೌರವ ಲಭಿಸಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಮಂಗಳೂರಿನಲ್ಲಿ ಕೆ.ನಾರಾಯಣ ಶೆಟ್ಟಿ ಸಂಸ್ಮರಣಾ ಸಮಿತಿ ಮತ್ತು ಪತಂಜಲಿ ಯೋಗಶಿಕ್ಷಣ ಪ್ರತಿಷ್ಠಾನ (ರಿ) ಅಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಮುಕ್ತ ಯೋಗಾಸನ ಸ್ಫರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದೇಶದಲ್ಲೂ ಅತೀ ಹೆಚ್ಚು ಜನರು ತಮ್ಮ ದೈನಂದಿನ ಚಟುವಟಿಕೆಯಾಗಿ ಪ್ರತಿನಿತ್ಯ ಯೋಗಾಭ್ಯಾಸವನ್ನು ಮಾಡುತ್ತಿರುವುದು ವಿಶೇಷ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ಯೋಗ ಪರಂಪರೆಯನ್ನು ವಿಶ್ವಯೋಗ ದಿನಾಚರಣೆ ಆಚರಿಸುವ ಮುಖೇನ ವಿಶ್ವದಲ್ಲಿ ಯೋಗಕ್ಕೆ ವಿಶ್ವಮಾನ್ಯತೆ ಸಿಗುವಲ್ಲಿ ಕಾರಣೀಭೂತರಾಗಿದ್ದಾರೆ. ಬಾಬಾ ರಾಮ್‍ದೇವ್ ಅವರ ಪತಂಜಲಿ ಯೋಗ ಶಿಕ್ಷಣದ ಮುಖಾಂತರ ಯೋಗ ಜನಜನಿತವಾಗಿದೆ ಎಂದು ಅಭಿಪ್ರಾಯಪಟ್ಟರು.
Click this button or press Ctrl+G to toggle between Kannada and English