ಮಂಗಳೂರು: ಮುಂಬೈ-ಕರ್ನಾಟಕ, ಉತ್ತರ ಕರ್ನಾಟಕ ಭಾಗದ ಪ್ರವಾಸದ ಬಳಿಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ದಕ್ಷಿಣ ಕನ್ನಡ ಭಾಗದಲ್ಲಿ ಪ್ರವಾಸ ಮಾಡಲಿದ್ದಾರೆ. ಮಾರ್ಚ್ 10ಕ್ಕೂ ಮೊದಲು ರಾಹುಲ್ ಜಿಲ್ಲೆಯಲ್ಲಿ ಸಂಚಾರ ನಡೆಸಲಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯು.ಬಿ.ವೆಂಟಕೇಶ್ ಈ ಕುರಿತು ಮಾಹಿತಿ ನೀಡಿದರು. ‘ಮಾರ್ಚ್ ಮೊದಲ ವಾರದಲ್ಲಿ ರಾಹುಲ್ ಗಾಂಧಿ ಉಡುಪಿ ಮತ್ತು ದಕ್ಷಿಣ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ.
ದಿನಾಂಕ ಇನ್ನೂ ನಿಗದಿಯಾಗಿಲ್ಲ’ ಎಂದರು. ಸವದತ್ತಿ ಯಲ್ಲಮ್ಮನಿಗೆ ಉಘೇ ಎಂದು ಎಐಸಿಸಿ ಅಧ್ಯಕ್ಷ ರಾಹುಲ್! ‘ಮೂರು ಅಥವ ನಾಲ್ಕು ದಿನಗಳ ಕಾಲ ರಾಹುಲ್ ಗಾಂಧಿ ಪ್ರವಾಸ ಮಾಡಲಿದ್ದಾರೆ. ವಿಶೇಷ ಬಸ್ ಮೂಲಕ ಅವರು ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ’ ಎಂದು ಯು.ಬಿ.ವೆಂಕಟೇಶ್ ವಿವರಣೆ ನೀಡಿದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಸಾಧನೆಯನ್ನು ಜನರಿಗೆ ತಿಳಿಸುವ ಮೂಲಕ ಪ್ರಚಾರ ನಡೆಸಲಾಗುತ್ತದೆ. ಬಿಜೆಪಿ ಕೋಮು ಭಾವನೆಗಳನ್ನು ಕೆರಳಿಸುವ ಮೂಲಕ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ’ ಎಂದು ಅವರು ದೂರಿದರು.
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ ಈಗಾಗಲೇ ಅಮಿತ್ ಶಾ ಒಂದು ಸುತ್ತಿನ ಸಂಚಾರ ಮುಗಿಸಿದ್ದಾರೆ. ಬಿಜೆಪಿ ಎರಡೂ ಜಿಲ್ಲೆಯ ಭಾರೀ ಪ್ರಭಾವ ಹೊಂದಿದೆ. ಈ ಬಾರಿಯ ಚುನಾವಣೆಯಲ್ಲಿ ಪಕ್ಷ ಎಷ್ಟು ಸ್ಥಾನಗಳಿಸಲಿದೆ? ಎಂದು ಕಾದು ನೋಡಬೇಕು.
Click this button or press Ctrl+G to toggle between Kannada and English