ಮಂಗಳೂರು ವಿವಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

6:10 PM, Thursday, March 1st, 2018
Share
1 Star2 Stars3 Stars4 Stars5 Stars
(5 rating, 1 votes)
Loading...

mangloreಮಂಗಳೂರು: ಇಂದು ವಿಜ್ಞಾನ ಕ್ಷೇತ್ರವು ಕ್ಷಿಪ್ರಗತಿಯಲ್ಲಿ ಬೆಳವಣಿಗೆ ಕಾಣುತ್ತಿದ್ದರೂ ಜನರಲ್ಲಿ ವೈಜ್ಞಾನಿಕ ಮನೋಭಾವನೆ ಕಡಿಮೆಯಾಗುತ್ತಿದೆ. ಇದಕ್ಕೆ ದೇಶದ ಸಾಂಸ್ಕೃತಿಕ ಪ್ರಭಾವಗಳೂ ಕಾರಣವಾಗುತ್ತಿದೆ. ಈ ನಿಟ್ಟಿನಲ್ಲಿ ನಮ್ಮಲ್ಲಿ ವೈಜ್ಞಾನಿಕ ಮನೋಭಾವವನ್ನು ಹೆಚ್ಚೆಚ್ಚು ಬೆಳೆಸುವ ಕಾರ್ಯ ಆಗಬೇಕಿದೆ ಎಂದು ಯೋಗಿ ವೆಮನ ವಿಶ್ವವಿದ್ಯಾನಿಲಯದ ಸ್ಥಾಪಕ ಕುಲಪತಿ ಪ್ರೊ.ಅರ್ಜುಲ ರಾಮಚಂದ್ರ ರೆಡ್ಡಿ ಅಭಿಪ್ರಾಯಪಟ್ಟರು.

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಬುಧವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ‘ಭಾರತದಲ್ಲಿ ವಿಜ್ಞಾನ ಮತ್ತು ವೈಜ್ಞಾನಿಕ ಸ್ವಭಾವ’ ಎಂಬ ವಿಷಯದಲ್ಲಿ ಅವರು ಉಪನ್ಯಾಸ ನೀಡಿದರು.

ವಿಜ್ಞಾನ ಕ್ಷೇತ್ರಕ್ಕೆ ನೊಬೆಲ್ ಪುರಸ್ಕೃತ ಸಿ.ವಿ.ರಾಮನ್ ಕೊಡುಗೆ ಅಪಾರವಾದುದು. ಹಿಂದಿನ ಕಾಲದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಸಾಧನೆ ಗಣನೀಯ ಅಲ್ಲದಿದ್ದರೂ ಇತ್ತೀಚಿನ ವರ್ಷಗಳಲ್ಲಿ ದೇಶವು ಈ ಕ್ಷೇತ್ರದಲ್ಲಿ ಉತ್ತಮವಾಗಿ ಮುನ್ನಡೆಯುತ್ತಿದೆ. ಇದರ ಜೊತೆಗೆ ವೈಜ್ಞಾನಿಕ ಸ್ವಭಾವವನ್ನೂ ಬೆಳೆಸಿಕೊಂಡು ನೂತನ ಆವಿಷ್ಕಾರಗಳಿಗೆ ಸಾಕ್ಷಿಯಾಗಬೇಕು ಎಂದರು.

ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಕೆ.ಭೈರಪ್ಪಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಮಂಗಳೂರು ವಿವಿ ಕುಲಸಚಿವ ಪ್ರೊ.ನಾಗೇಂದ್ರ ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾರ್ಯಕ್ರಮದ ಸಂಘಟಕರಾದ ಪ್ರೊ. ಭೋಜ ಪೂಜಾರಿ ವಂದಿಸಿದರು. ಡಾ.ಮೋನಿಕಾ ಕಾರ್ಯಕ್ರಮ ನಿರೂಪಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English