- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕಲ್ಲಡ್ಕ ಬಳಿ ಭೀಕರ ಸರಣಿ ಅಪಘಾತ: ಕಾರಿನಲ್ಲಿದ್ದವರು ಪವಾಡಸದೃಶ ಪಾರು

accident [1]ಮಂಗಳೂರು: ಕಲ್ಲಡ್ಕ ಬಳಿ ಭೀಕರ ಸರಣಿ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ನಾಲ್ಕು ಮಂದಿ ಪ್ರಯಾಣಿಕರು ಪವಾಡ ಸದೃಶವಾಗಿ ಪಾರಾಗಿದ್ದಾರೆ.

ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಈ ಘಟನೆ ನಡೆದಿದೆ. ಬಸ್‌ ಹಾಗೂ ಕಾರಿಗೆ ಡಿಕ್ಕಿಯಾದ ಟಿಪ್ಪರ್ ಲಾರಿ ಕಾರಿನ ಮೇಲೇರಿದೆ. ಅದಾಗ್ಯೂ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪವಾಡ ಸದೃಶವೆಂಬಂತೆ ಪಾರಾಗಿದ್ದಾರೆ. 6 ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.