ನಾಗಾಲ್ಯಾಂಡ್: ಮೂರು ರಾಜ್ಯಗಳ ಚುನಾವಣೆ ಮತ ಎಣಿಕೆ ಭರದಿಂದ ಸಾಗಿದ್ದು ಕುತೂಹಲ ಹೆಚ್ಚಿಸಿದೆ. ತ್ರಿಪುರಾ ಮತ್ತು ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಮೈತ್ರಿಕೂಟ ಮುಂದಕ್ಕೆ ಸಾಗಿದ್ರೆ, ಇತ್ತ ಮೇಘಾಲಯದಲ್ಲಿ ಕಾಂಗೈ ಭರ್ಜರಿಯಾಗಿ ಮುನ್ನುಗ್ಗುತ್ತಿದೆ.
ತ್ರಿಪುರಾದಲ್ಲಿ ಬಿಜೆಪಿ ಮೈತ್ರಿಕೂಟ ಭರ್ಜರಿ ಮುನ್ನಡೆ ಸಾಧಿಸಿದೆ. ಒಟ್ಟು ಇರುವ 59 ಕ್ಷೇತ್ರಗಳ ಪೈಕಿ ಬಿಜೆಪಿ 42 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನುಳಿದಂತೆ ಸಿಪಿಎಂ 17 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಆದ್ರೆ ಪ್ರಮುಖ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್‌ಗೆ ಒಂದೇ ಒಂದು ಸ್ಥಾನದಲ್ಲೂ ಮುನ್ನಡೆ ಸಿಕ್ಕಿಲ್ಲ.
ಈಶಾನ್ಯ ರಾಜ್ಯ ನಾಗಾಲ್ಯಾಂಡ್‌ನಲ್ಲೂ ವಿಪಕ್ಷ ಬಿಜೆಪಿ ಮೈತ್ರಿಕೂಟಕ್ಕೆ ಅಲ್ಪ ಮುನ್ನಡೆ ಸಿಕ್ಕಿದೆ. ಮತ ಎಣಿಕೆಯಲ್ಲಿ ಆರಂಭಿಕವಾಗಿ ಹಿನ್ನೆಡೆ ಸಾಧಿಸಿದ್ರೂ, ನಂತರ ಬಿಜೆಪಿ ಮೈತ್ರಿಕೂಟ ಮುನ್ನಡೆ ಸಾಧಿಸಿದೆ. ಜೊತೆಗೆ, ಆಡಳಿತ ಪಕ್ಷ ಎನ್‌ಪಿಎಫ್ ಜೊತೆ ಟೈಟ್ ಫೈಟ್ ನಡೆಸ್ತಾ ಇದೆ. ಇನ್ನು 60 ಕ್ಷೇತ್ರಗಳ ಪೈಕಿ ಬಿಜೆಪಿ 29 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಎನ್‌ಪಿಪಿ 26 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 1 ಹಾಗೂ ಇತರರು 4 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಮೇಘಾಲಯ ವಿಧಾನಸಭಾ ಚುನಾವಣಾ ಫಲಿತಾಂಶ ಅತಂತ್ರದಲ್ಲಿದೆ. ಈಗಾಗಲೇ ಮತ ಎಣಿಕೆ ಆರಂಭವಾಗಿದ್ದು, ಕಾಂಗ್ರೆಸ್‌ಗೆ ಹೆಚ್ಚಿನ ಮುನ್ನಡೆ ಸಿಕ್ಕಿದೆ. ಇತ್ತೀಚಿನ ವರದಿ ಬಂದಾಗ ಇರುವ 59 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 21 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಎನ್‌ಪಿಪಿ 14 ಕ್ಷೇತ್ರಗಳಲ್ಲಿ, ಬಿಜೆಪಿ 5 ಹಾಗೂ ಇತರರು 19 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
Click this button or press Ctrl+G to toggle between Kannada and English