ಮಂಗಳೂರು : ಬಿಜೆಪಿ ಹಮ್ಮಿಕೊಂಡಿರುವ ಮಂಗಳೂರು ಚಲೋ ಜನಸುರಕ್ಷಾ ಯಾತ್ರೆಯು ಇಂದು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಪ್ರವೇಶಿಸಿದ್ದು ಇಲ್ಲಿ ಪಾದಯಾತ್ರೆ ನಡೆಸಲಾಯಿತು.
ಸಿದ್ದರಾಮಯ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆಯಿಂದಾಗಿ ಕರ್ನಾಟಕದಲ್ಲಿ ನಿರಂತರವಾಗಿ ಹಿಂದೂ ಕಾರ್ಯಕರ್ತರ ವ್ಯವಸ್ಥಿತ ಹತ್ಯೆಯಾಗುತ್ತಿದೆ ಎಂದು ಆಪಾದಿಸಿ ಬಿಜೆಪಿ ಮಾ. 3 ರಿಂದ ಮಂಗಳೂರು ಚಲೋ ಜನಸುರಕ್ಷಾ ಯಾತ್ರೆ ಆರಂಭಿಸಿದೆ.
ಮಾ. 3 ರಂದು ಅಂಕೋಲಾ ಮತ್ತು ಕುಶಾಲನಗರದಿಂದ ಹೊರಟ ಜನಸುರಕ್ಷಾ ಯಾತ್ರೆ ಮಾ. 6 ರಂದು ಮಂಗಳೂರು ತಲುಪಲಿದೆ. ಮಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಲಿದ್ದಾರೆ.
Click this button or press Ctrl+G to toggle between Kannada and English