ಮೂರು ಮಕ್ಕಳನ್ನು ಹುಟ್ಟಿಸಿದರೆ ಮೂರು ತಿಂಗಳು ಜೈಲು 10 ಸಾವಿರ ದಂಡ

11:03 AM, Wednesday, September 28th, 2011
Share
1 Star2 Stars3 Stars4 Stars5 Stars
(4 rating, 1 votes)
Loading...

Kerala family plan

ತಿರುವನಂತಪುರ : ಕೇರಳದಲ್ಲಿ ಏರುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಮತ್ತು ಜನಸಂಖ್ಯೆ ನಿಯಂತ್ರಣ ಯೋಜನೆಯನ್ನು ಕಟ್ಟುನಿಟ್ಟುಗೊಳಿಸುವ ಸಲುವಾಗಿ ಕೇರಳ ಸರ್ಕಾರ ಎರಡು ಮಕ್ಕಳು ಮಾತ್ರ ಎಂಬ ಕಾಯಿದೆ ಜಾರಿಗೊಳಿಸಲು ನಿರ್ಧರಿಸಿದೆ.

ನ್ಯಾ.ವಿ.ಆರ್.ಕೃಷ್ಣ ಅಯ್ಯರ್ ನೇತೃತ್ವದ ಆಯೋಗ ಹಲವು ಕಠಿಣ ಕ್ರಮಗಳನ್ನು ಜ್ಯಾರಿ ಗೊಳಿಸುವಂತೆ ಸರಕಾರಕ್ಕೆ ಶಿಫಾರಸ್ಸು ಮಾಡಿದೆ. ಅದರಂತೆ ಮೂರನೇ ಮಗುವನ್ನು ಹೊಂದುವ ತಂದೆ ತಾಯಿಗೆ ಜೈಲು ಶಿಕ್ಷೆ ಮತ್ತು ಸರ್ಕಾರಿ ಸೌಲಭ್ಯ ಮಾನ್ಯತೆಯನ್ನು ರದ್ದುಗೊಳಿಸುವುದು ಮುಂತಾದ ಕ್ರಮಗಳನ್ನು ಜಾರಿಗೊಳಿಸಲು ಸರ್ಕಾರ ಚಿಂತಿಸಿದೆ.

ಆಯೋಗದ 12 ಸದಸ್ಯರ ಸಲಹೆ ಮೇರೆಗೆ ಮೂರನೇ ಮಗುವನ್ನು ಪಡೆಯುವ ತಂದೆಗೆ ಹೆಂಡತಿ ಗರ್ಭಿಣಿಯಾಗಿರುವಾಗಲೇ ಮೂರು ತಿಂಗಳ ಕಾರಾಗೃಹ ವಾಸ ಮತ್ತು 10 ಸಾವಿರ ರೂ.ಗಿಂತ ಹೆಚ್ಚಿನ ಜುಲ್ಮಾನೆಯನ್ನು ವಿಧಿಸಬೇಕು ಹಾಗೂ ಈ ದಂಪತಿಯನ್ನು ಕಾನೂನು ಪ್ರಕಾರ ಎಲ್ಲಾ ಯೋಜನೆಗಳು, ಸೌಲಭ್ಯಗಳಿಗೆ ಅನರ್ಹರು ಎಂದು ಪರಿಗಣಿಸಬೇಕೆಂದು ಆದೇಶ ನೀಡಿದೆ.

ಜನನ ನಿಯಂತ್ರಣ ಮಾಡಲು ಸರಕಾರ ಕೇರಳದಲ್ಲಿ ಈ ರೀತಿಯ ಕಾನೂನು ಜಾರಿಗೆ ಮುಂದಾಗಿರುವುದಕ್ಕೆ ಭಾರಿ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಅಲ್ಪಸಂಖ್ಯಾತರು, ಮುಸ್ಲಿಂ ಲೀಗ್, ಕೆಲ ಹೆಸರಾಂತ ನಟರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕಾಯಿದೆ ಪೋಷಕರ ಹಕ್ಕು ಕಿತ್ತುಕೊಂಡಂತೆ. ಧಾರ್ಮಿಕ ಸಂಘಟನೆಗಳು ಫ್ಯಾಮಿಲಿ ಪ್ಲ್ಯಾನಿಂಗ್ ವಿಷಯದಲ್ಲಿ ಮೂಗು ತೂರಿಸಬಾರದು ಎಂಬುದು ಪ್ರಜಾಪ್ರಭುತ್ವ ವಿರೋಧಿ ಎಂದು ಕ್ಯಾಥೋಲಿಕ್ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದೆ.

ಆದರೆ, ಕಾಂಗ್ರೆಸ್ ಸರ್ಕಾರ ಇರುವ ತನಕ ಅಲ್ಪಸಂಖ್ಯಾತರು ಹಾಗೂ ಧಾರ್ಮಿಕ ಹಕ್ಕುಗಳಿಗೆ ತೊಂದರೆಯಾಗುವುದಿಲ್ಲ. ಈ ಕಾಯಿದೆ ಚರ್ಚೆಗಷ್ಟೇ ಸೀಮಿತವಾಗಲಿದೆ. ಅಸೆಂಬ್ಲಿಯಲ್ಲಿ ಅಂಗೀಕಾರ ಆಗುವುದಕ್ಕೆ ಬಿಡುವುದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಮುನೀರ್ ಭರವಸೆ ನೀಡಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English