ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಭಯೋತ್ಪಾದಕರ ಎರಡು ಫ್ಯಾಕ್ಟರಿಗಳನ್ನು ಬಂದ್ ಮಾಡುತ್ತೇವೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಗುಡುಗಿದ್ದಾರೆ.
ಸೋಮವಾರ ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಜಿಲ್ಲೆಯಲ್ಲಿ ನಡೆಯುತ್ತಿರುವ ಗಲಭೆಗಳನ್ನು ನಿಯಂತ್ರಿಸಲು ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದೇವೆ. ಸಂಘ ಪರಿವಾರದ ಫ್ಯಾಕ್ಟರಿ ಹಾಗೂ ಎಸ್ ಡಿಪಿಐ, ಪಿಎಫ್ಐ ಫ್ಯಾಕ್ಟರಿಗಳನ್ನು ಬಂದ್ ಮಾಡ್ತೇವೆ,” ಎಂದು ತಿಳಿಸಿದ್ದಾರೆ.
“ಪಿಎಫ್ಐ ಬ್ಯಾನ್ ಮಾಡಿ ಎಂದು ಬಿಜೆಪಿಯವರು ಹೇಳುತ್ತಾರೆ. ಆದರೆ, ಬಿಜೆಪಿ ಅಧಿಕಾರದಲ್ಲಿದ್ದಾಗ ಪಿಎಫ್ಐ ಯಾಕೆ ಬ್ಯಾನ್ ಮಾಡಿಲ್ಲ?” ಎಂದು ಪ್ರಶ್ನಿಸಿದ ಅವರು, “ಕಾಂಗ್ರೆಸ್ ಮತ ಒಡೆಯಲು ಪಿಎಫ್ಐ ಹಾಗೂ ಎಸ್ ಡಿಪಿಐ ಸಂಘಟನೆಗಳನ್ನು ಬೆಳೆಸಿದವರೇ ಬಿಜೆಪಿಯವರು ಎಂದು ವಾಗ್ದಾಳಿ ನಡೆಸಿದರು.
ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, “ಗೌರಿ ಹತ್ಯೆ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ವಿಧಾನಸಭೆಯಲ್ಲೂ ಪ್ರಕರಣ ಬೇಗ ಪತ್ತೆಯಾಗುತ್ತದೆ ಎಂದು ತಿಳಿಸಿದ್ದೇನೆ. ಪ್ರಕರಣದ ಕುರಿತಂತೆ ಎಸ್ಐಟಿ ಯವರು ತನಿಖೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸೋದಿಲ್ಲ,” ಎಂದು ತಿಳಿಸಿದರು.
Click this button or press Ctrl+G to toggle between Kannada and English