ಮಂಗಳೂರು: ಸರಕಾರವು ಬಡಜನರ ಅನುಕೂಲಕ್ಕಾಗಿ ತಕ್ಷಣ ಪಡಿತರ ಚೀಟಿ ವಿತರಣೆ ಯೋಜನೆಯನ್ನು ಜಾರಿಗೆ ತಂದಿದ್ದು, ಫೆ. 23 ರಿಂದ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಬಿಪಿಎಲ್ ಪಡಿತರ ಚೀಟಿ ಪಡೆಯಲು ಕುಟುಂಬದ ವಾರ್ಷಿಕ ಆದಾಯ ಮಿತಿಯನ್ನು 1.20 ಲಕ್ಷ ರೂ.ಒಳಗೆ ಸರಕಾರವು ನಿಗದಿ ಪಡಿಸಿದೆ.
ಆದರೆ, ಕೆಲವು ಅರ್ಜಿಗಳನ್ನು ಪರಿಶೀಲಿಸಿದಾಗ, ಆದಾಯದ ಬಗ್ಗೆ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿ ಪಡೆಯುತ್ತಿರುವುದು/ಪಡೆಯಲೆತ್ನಿಸುತ್ತಿರುವುದು ಕಂಡು ಬಂದಿದೆ. ಇದಲ್ಲದೆ, ಬಿಪಿಎಲ್ ಪಡಿತರ ಚೀಟಿ ಪಡೆಯುವ ಉದ್ದೇಶಕ್ಕಾಗಿ ಕುಟುಂಬವನ್ನು ವಿಂಗಡಿಸಿ, ಒಂದೇ ವಿಳಾಸದಲ್ಲಿದ್ದು ಪ್ರತ್ಯೇಕ ಅರ್ಜಿ ಸಲ್ಲಿಸುತ್ತಿರುವುದು ಕೂಡಾ ಕಂಡುಬಂದಿದೆ. ಒಂದು ವೇಳೆ ಸರಕಾರಕ್ಕೆ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿ ಪಡೆದುಕೊಂಡಲ್ಲಿ, ಪಡಿತರ ಸಾಮಗ್ರಿಗಳ ಪೂರ್ಣ ಮೊಬಲಗನ್ನು ವಸೂಲಿ ಮಾಡುವುದರೊಂದಿಗೆ ಅಂತಹವರ ವಿರುದ್ಧ ಕ್ರಿುನಲ್ ಮೊಕದ್ದಮೆಯನ್ನು ಹೂಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಎ.ಟಿ. ಜಯಪ್ಪ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ವೃತ್ತಿ ತೆರಿಗೆ, ಸೇವಾ ತೆರಿಗೆ ಮತ್ತು ವ್ಯಾಟ್ ಪಾವತಿಸುವ ಯಾವುದೇ ಕುಟುಂಬಗಳು/ಸರಕಾರೀ ನೌಕರರು/ಅರೆ ಸರಕಾರೀ ನೌಕರರು ಸಹ ಬಿಪಿಎಲ್ ಪಡಿತರ ಚೀಟಿ ಪಡೆಯಲು ಅನರ್ಹರಾಗಿದ್ದು, ತಪ್ಪು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿ ಪಡೆದುಕೊಂಡಲ್ಲಿ ಸಂಬಂಧ ಪಟ್ಟ ಇಲಾಖಾ ಮುಖ್ಯಸ್ಥರ ಮೂಲಕ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದವರು ತಿಳಿಸಿದ್ದಾರೆ.
Click this button or press Ctrl+G to toggle between Kannada and English