ಕುಡಿದು ವಾಹನ ಚಲಾಯಿಸಿದರೆ ಹುಷಾರ್.. ವಿಡಿಯೋ ರೆಕಾರ್ಡಿಂಗ್ ಮಾಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು: ಟಿ.ಆರ್. ಸುರೇಶ್

12:55 PM, Saturday, March 10th, 2018
Share
1 Star2 Stars3 Stars4 Stars5 Stars
(No Ratings Yet)
Loading...

commissionerಮಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ಬಗ್ಗೆ ವಿಡಿಯೋ ರೆಕಾರ್ಡಿಂಗ್ ಮಾಡಿ, ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್ ಹೇಳಿದ್ದಾರೆ.

ತನ್ನ ಕಚೇರಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರ ದೂರುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು. ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಬಸ್, ರಿಕ್ಷಾ, ಕಾರು, ಬೈಕ್ ಮತ್ತು ಇತರ ವಾಹನಗಳ ಚಾಲಕರ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಸಿಟಿ ಬಸ್ ಕಾರ್ಮಿಕರಿಗೆ ತರಬೇತಿಯನ್ನು ಏರ್ಪಡಿಸಿ ವಾಹನ ಚಾಲನೆ ಮತ್ತು ಸಾರ್ವಜನಿಕರ ಜೊತೆಗೆ ವ್ಯವಹರಿಸುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗಿದ್ದರೂ ಬಸ್ ಸಿಬ್ಬಂದಿ ಸುಧಾರಿಸಿಲ್ಲ ಎಂದು ಸಾರ್ವಜನಿಕರು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸ್ ಕಮಿಷನರ್, ಇನ್ನು ಮುಂದೆ ನೋಟೀಸು ನೀಡುವುದಿಲ್ಲ. ವೀಡಿಯೋ ಚಿತ್ರೀಕರಣ ಮಾಡಿ ನೇರವಾಗಿ ಕೇಸು ದಾಖಲಿಸಲಾಗುವುದು ಎಂದರು.

ಮೀನಿನ ಲಾರಿಗಳು ರಸ್ತೆಯಲ್ಲಿ ನೀರು ಚೆಲ್ಲುತ್ತಾ ಸಾಗುತ್ತಿರುವ ಬಗೆಗಿನ ದೂರುಗಳಿಗೆ ಉತ್ತರಿಸಿದ ಕಮಿಷನರ್, ಈ ಕುರಿತಂತೆ ಮೀನಿನ ಲಾರಿಗಳನ್ನು ನಿರ್ಗಮನ ಪಾಯಿಂಟ್‌ನಲ್ಲಿ (ಹಳೆ ಬಂದರು) ತಪಾಸಣೆಗೆ ವ್ಯವಸ್ಥೆ ಮಾಡಲಾಗುವುದು ಎಂದರು.

ಡಿಸಿಪಿಡಿಗಳಾದ ಹನುಮಂತರಾಯ ಮತ್ತು ಉಮಾ ಪ್ರಶಾಂತ್, ಎಸಿಪಿಗಳಾದ ಮಂಜುನಾಥ ಶೆಟ್ಟಿ ಮತ್ತು ವೆಲೆಂಟೈನ್ ಡಿ’ಸೋಜಾ, ಟ್ರಾಫಿಕ್ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಶಿವಪ್ರಕಾಶ್, ಕುಮಾರಸ್ವಾಮಿ, ಚಂದ್ರ, ಎಎಸ್ಐ ಯೂಸುಫ್, ಹೆಡ್‌ಕಾನ್ಸ್‌ಟೇಬಲ್ ಪುರುಷೋತ್ತಮ, ಕೆನರಾ ಬಸ್ ಮಾಲಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್, ದ.ಕ. ಜಿಲ್ಲಾ ಬಸ್ ಮಾಲಕರ (ಸಿಟಿ ಬಸ್) ಸಂಘದ ಜೊತೆ ಕಾರ್ಯದರ್ಶಿ ರಾಮಚಂದ್ರ ಪಿಲಾರು ಇದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English