ಉಡುಪಿ: ರಾಜ್ಯದಲ್ಲಿ ಚುನಾವಣೆ ಕಾವು ಏರಿರುವಾಗಲೇ ಮಠಾಧೀಶರು ಕೂಡ ಚುನಾವಣಾ ಕಣಕ್ಕೆ ಧುಮುಕಲು ಮುಂದಾಗಿದ್ದಾರೆ.
ಹೌದು, ಶೀರೂರು ಮಠಾಧೀಶ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರು ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.
ಅವಕಾಶ ಸಿಕ್ಕರೆ ಬಿಜೆಪಿಯಿಂದ ಸ್ಪರ್ಧಿಸುತ್ತೇನೆ. ಇಲ್ಲದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭೆ ಚುನಾವಣೆಗೆ ಇಳಿಯುತ್ತೇನೆ ಎಂದು ಸ್ವಾಮೀಜಿ ಘೋಷಿಸಿದ್ದಾರೆ.
ಜನಪ್ರತಿನಿಧಿಗಳು ಜನರ ನಿರೀಕ್ಷೆಯಂತೆ ಕೆಲಸ ಮಾಡುತ್ತಿಲ್ಲ. ಅದಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಜನಸೇವೆ ಮಾಡಲು ನಿರ್ಧರಿಸಿದ್ದೇನೆ. ಮಠಾಧೀಶರು ಚುನಾವಣೆಯಲ್ಲಿ ಸ್ಪರ್ಧಿಸಬಾರದೆಂದೇನಿಲ್ಲ. ಯೋಗಿ ಆದಿತ್ಯನಾಥ್ ನನ್ನ ರೋಲ್ ಮಾಡೆಲ್ ಇದ್ದ ಹಾಗೆ. ಪ್ರಮೋದ್ ಮಧ್ವರಾಜ್ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಶೀರೂರು ಮೂಲಮಠದಲ್ಲಿ ಶ್ರೀಗಳು ಹೇಳಿಕೆ ನೀಡಿದ್ದಾರೆ.
Click this button or press Ctrl+G to toggle between Kannada and English