ವೆನ್ಲಾಕ್‌ನಲ್ಲಿ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ವಿಭಾಗಕ್ಕೆ ಶಿಲಾನ್ಯಾಸ, ಎಚ್‌ಎಲ್‌ಎಲ್‌ಎಂಆರ್‌ಐ ವಿಭಾಗದ ಲೋಕಾರ್ಪಣ

3:55 PM, Saturday, March 10th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

ramanath-raiಮಂಗಳೂರು: ದ.ಕ. ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ ಇವುಗಳ ಸಹಭಾಗಿತ್ವದಲ್ಲಿ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಸೂಪರ್ ಸ್ಪೆಶಾಲಿಟಿ ವೈದ್ಯಕೀಯ ವಿಭಾಗ, ವೆನ್ಲಾಕ್ ಮಕ್ಕಳ ಆರೋಗ್ಯ ಕೇಂದ್ರ, ಜಿಲ್ಲಾ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ಮತ್ತು ವೆನ್ಲಾಕ್ ಜಿಲ್ಲಾ ಸಂಯುಕ್ತ ಆಯುಷ್ ಆಸ್ಪತ್ರೆ ಕಟ್ಟಡಗಳಿಗೆ ಶಿಲಾನ್ಯಾಸ ಹಾಗೂ ಎಚ್‌ಎಲ್‌ಎಲ್‌ಎಂಆರ್‌ಐ ವಿಭಾಗದ ಲೋಕಾರ್ಪಣೆ ಕಾರ್ಯಕ್ರಮ ಇಂದು ಬೆಳಗ್ಗೆ ನಗರದ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಜರುಗಿತು.

ಶಿಲಾನ್ಯಾಸ ಹಾಗೂ ಲೋಕಾರ್ಪಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಬೆಂಗಳೂರಿನಲ್ಲಿರುವಂತೆ ಮಂಗಳೂರಿನಲ್ಲಿಯೂ ಮಾಜಿ ಪ್ರಧಾನಿ, ದಿವಂಗತ ಇಂದಿರಾ ಗಾಂಧಿಯವರ ಹೆಸರಿನಲ್ಲಿ ಪ್ರಸ್ತುತ ಇರುವ ಆರ್‌ಎಪಿಸಿಸಿ ಆಸ್ಪತ್ರೆ ಮೇಲ್ದರ್ಜೆಗೇರಲಿದೆ. ಇದಕ್ಕಾಗಿ ಈಗಾಗಲೇ 3 ಕೋಟಿರೂ. ಬಿಡುಗಡೆ ಆಗಿದೆ ಎಂದು ಸಚಿವ ರೈ ಹೇಳಿದರು.

ಲೇಡಿಗೋಶನ್‌ನ ನೂತನ ಆಸ್ಪತ್ರೆ ಕೆಲ ದಿನಗಳಲ್ಲೇ ಉದ್ಘಾಟನೆಗೊಂಡು ಮಹಿಳೆಯರ ಆರೋಗ್ಯ ಸೇವೆಗೆ ಲಭ್ಯವಾಗಲಿದೆ ಎಂದರು.

ವೆನ್‌ಲಾಕ್ ಆಸ್ಪತ್ರೆಯಲ್ಲಿ 50 ಬೆಡ್‌ನ ಆಯುಷ್ ಆಸ್ಪತ್ರೆ ನಿರ್ಮಾಣವಾಗುವ ಮೂಲಕ ಒಂದೇ ಸೂರಿನಡಿ ಅಲೋಪತಿ ಹಾಗೂ ಆಯುಷ್‌ಗೆ ಸಂಬಂಧಿಸಿದ ಚಿಕಿತ್ಸೆಗಳು ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಸಚಿವ ಯು.ಟಿ.ಖಾದರ್ ಹೇಳಿದರು.

ಬೆಂಗಳೂರು ನಗರ ಹೊರತುಪಡಿಸಿ 20 ಹಾಸಿಗೆಗಳ ಐಸಿಯು ಹೊಂದಿರುವ ಸರಕಾರಿ ಆಸ್ಪತ್ರೆ ವೆನ್ಲಾಕ್ ಆಗಿದ್ದು, ಮುಂದಿನ ಎರಡು ವರ್ಷಗಳಲ್ಲಿ ಈ ಆಸ್ಪತ್ರೆಯಲ್ಲಿ ಇನ್ನಷ್ಟು ಹೊಸ ಸೌಲಭ್ಯಗಳೊಂದಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಲಿದೆ ಎಂದರು.

ಶಾಸಕ ಜೆ.ಆರ್. ಲೋಬೊ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಮೇಯರ್ ಭಾಸ್ಕರ ಮೊಯ್ಲಿ, ಉಪ ಮೇಯರ್ ಮುಹಮ್ಮದ್ ಕೆ., ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಜಿಪಂ ಸ್ಥಾಯಿ ಸಮಿತಿಯ ಅಧ್ಯಕ್ಷ ಶಾಹುಲ್ ಹಮೀದ್, ಫಾರ್ ಮುಲ್ಲರ್ ಹೋಮಿಯೋಪತಿ ವಿಭಾಗದ ಡಾ. ಶಿವಪ್ರಸಾದ್, ಆಳ್ವಾಸ್ ನ್ಯಾಚುರೋಪತಿ ಕಾಲೇಜಿನ ಪ್ರಾಂಶುಪಾಲೆ ಡಾ.ವನಿತಾ ಶೆಟ್ಟಿ, ಕರ್ನಾಟಕ ಆಯುರ್ವೇದಿಕ್ ಕಾಲೇಜಿನ ಪ್ರಾಂಶುಪಾಲ ಡಾ.ಸಂತೋಷ್, ಮನಪಾ ಸದಸ್ಯ ವಿನಯ್‌ರಾಜ್, ತಾ.ಪಂ. ಸದಸ್ಯ ಅಬ್ದುಲ್ ಜಬ್ಬಾರ್, ಡಾ. ಆಶಾ ಜ್ಯೋತಿ ರೈ, ಕೆಎಂಸಿ ಡೀನ್ ಡಾ. ವೆಂಕಟರಾಯ ಪ್ರಭು, ಲೇಡಿಗೋಶನ್ ಆಸ್ಪತ್ರೆ ಅಧೀಕ್ಷಕಿ ಡಾ. ಸವಿತಾ ಮೊದಲಾದವರು ಉಪಸ್ಥಿತರಿದ್ದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮಕೃಷ್ಣ ರಾವ್ ಸ್ವಾಗತಿಸಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English