ದುರಸ್ತಿಯಾಗದ ರಸ್ತೆ: ಮತದಾನ ಬಹಿಷ್ಕಾರಕ್ಕೆ ಬಂದರು-ಮೊಗ್ರು ಗ್ರಾಮಸ್ಥರ ನಿರ್ಧಾರ

3:18 PM, Monday, March 12th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

belthangadyಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಲ್ಲಮಾಡ-ಮುಗೇರಡ್ಕ ರಸ್ತೆ ದುರಸ್ತಿ ಮಾಡದ ಹಿನ್ನೆಲೆಯಲ್ಲಿ ಬಂದರು-ಮೊಗ್ರು ಗ್ರಾಮಸ್ಥರು ಮುಂಬರುವ ವಿಧಾನಸಭಾ ಚುನಾವಣೆಯ ಮತದಾನ ಬಹಿಷ್ಕಾರ ಮಾಡಲು ನಿರ್ಧರಿಸಿದ್ದಾರೆ.

ಬೆಳ್ತಂಗಡಿ-ಉಪ್ಪಿನಂಗಡಿಯನ್ನು ಸಂಪರ್ಕಿಸುವ ಪ್ರಮುಖ ರಸ್ತೆ ಮಾರ್ಗ ಇದಾಗಿದೆ. ಅಲ್ಲದೆ ಬಂದರು-ಮೊಗ್ರು ಗ್ರಾಮದಲ್ಲಿ ಸುಮಾರು 90ಕ್ಕೂ ಅಧಿಕ ಕುಟುಂಬಗಳಿವೆ. ಆದರೆ ರಸ್ತೆಯ ದುರಸ್ತಿ ಆಗದ ಕಾರಣ 90ಕ್ಕೂ ಅಧಿಕ ಕುಟುಂಬದ 500ಕ್ಕೂ ಅಧಿಕ ಜನ ಮತದಾನ ಬಹಿಷ್ಕಾರಕ್ಕೆ ನಿರ್ಧಾರ ಮಾಡಿದ್ದಾರೆ.

ರಸ್ತೆ ದುರಸ್ತಿ ಬಗ್ಗೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಬೆಳ್ತಂಗಡಿ ಶಾಸಕ ವಸಂತ್ ಬಂಗೇರ ಅವರಿಗೂ ಮನವಿ ಮಾಡಲಾಗಿದೆ ಎಂಬುದು ಗ್ರಾಮಸ್ಥರ ಮಾತಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English