ಬೆಂಗಳೂರು: ಬಿರುಬೇಸಿಗೆಯಲ್ಲಿ ಬೆಂದು ಹೋಗಿರುವ ಬೆಂಗಳೂರಿಗರಿಗೆ ಸದ್ಯದಲ್ಲೇ ವರುಣನ ಸ್ಪರ್ಶವಾಗಲಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬಂಗಾಳಕೊಲ್ಲಿಯ ತಮಿಳುನಾಡು ಹಾಗೂ ಶ್ರೀಲಂಕಾ ನಡುವಿನ ಕೊಮರಿನೇರಿಯಾವರೆಗೆ ವಾಯುಭಾರ ಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಇನ್ನೆರಡು ದಿನ ಬೆಂಗಳೂರು ಸೇರಿದಂತೆ ಎಲ್ಲೆಡೆ ಮಂಗಳವಾರ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ.
ಪ್ರಸಕ್ತ ಉಂಟಾಗಿರುವ ವಾಯುಭಾರ ಕುಸಿತದಿಂದ ಮುಂದಿನ 48 ಗಂಟೆಯವರೆಗೆ ಕರ್ನಾಟಕದ ಮೇಲೆ ಪ್ರಭಾವ ಬೀರುವುದಿಲ್ಲ. ಆದರೆ ಇನ್ನಷ್ಟು ವಾಯುಭಾರ ಕುಸಿತ ಉಂಟಾದರೇ ಅರಬ್ಬಿ ಸಮುದ್ರದ ಆಗ್ನೆಯ ದಿಕ್ಕಿಗೆ ವ್ಯಾಪಿಸಲಿದೆ. ಹೀಗಾಗಿ ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಯಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.
Click this button or press Ctrl+G to toggle between Kannada and English