ಮಂಗಳೂರು ಪಬ್‌ ಅಟ್ಯಾಕ್‌ ಪ್ರಕರಣ: ಮುತಾಲಿಕ್‌ ಸೇರಿ ಎಲ್ಲ ಆರೋಪಿಗಳು ಖುಲಾಸೆ

10:53 AM, Tuesday, March 13th, 2018
Share
1 Star2 Stars3 Stars4 Stars5 Stars
(No Ratings Yet)
Loading...

muthalikಮಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಮಂಗಳೂರಿನ ಪಬ್ ದಾಳಿ ಪ್ರಕರಣದ ಆರೋಪಿಗಳನ್ನು ಸಾಕ್ಷ್ಯಾಧಾರದ ಕೊರತೆಯಿಂದ ಖುಲಾಸೆಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 30 ಮಂದಿ ಆರೋಪಿಗಳನ್ನು ಮೂರನೇ ಜೆಎಂಎಫ್‌ಸಿ ನ್ಯಾಯಾಲಯ ಖುಲಾಸೆಗೊಳಿಸಿದೆ.

muthalik-2

muthalik-4ನಗರದ ಬಲ್ಮಠ ರಸ್ತೆಯಲ್ಲಿರುವ ಅಮ್ನೇಶಿಯಾ ಪಬ್‌ನಲ್ಲಿದ್ದ ಯುವತಿಯರ ಮೇಲೆ 2009ರ, ಜನವರಿ 24ರಂದು ಹಲ್ಲೆ ನಡೆದಿತ್ತು. ಇದು ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂದರು ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆಯ ಪ್ರಮುಖರಾದ ಪ್ರಮೋದ್ ಮುತಾಲಿಕ್ ಅವರನ್ನೂ ಬಂಧಿಸಲಾಗಿತ್ತು.

muthalik--3ಇದೀಗ ನ್ಯಾಯಾಧೀಶರಾದ ಮಂಜುನಾಥ್ ಸಾಕ್ಷ್ಯಾಧಾರದ ಕೊರತೆಯಿಂದ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿದ್ದಾರೆ. ನ್ಯಾಯವಾದಿ ಆಶಾ ನಾಯಕ್ ಹಾಗೂ ವಿನೋದ್ ಪಾಲ್ ಆರೋಪಿಗಳ ಪರವಾಗಿ ವಾದಿಸಿದರು.

ಪ್ರಕರಣದ ಮೂವರು ಆರೋಪಿಗಳು ವಿದೇಶದಲ್ಲಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಒಟ್ಟು 27 ಮಂದಿಯನ್ನು ವಿಚಾರಣೆಗೊಳಪಡಿಸಲಾಗಿತ್ತು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English