ಬೇಡಿಕೆಗಳಿಗೆ ಸ್ಪಂದಿಸುವಂತೆ ಆಗ್ರಹ… ಕಾರ್ಮಿಕ ಭವಿಷ್ಯ ನಿಧಿ ಕಚೇರಿಗೆ ಮುತ್ತಿಗೆ

10:10 AM, Wednesday, March 14th, 2018
Share
1 Star2 Stars3 Stars4 Stars5 Stars
(No Ratings Yet)
Loading...

CIT-mangaluruಮಂಗಳೂರು: ಆಧಾರ್‌ ಕಾರ್ಡ್‌ನ್ನು ಯಾವುದೇ ಕಾರಣಕ್ಕೂ ಕಡ್ಡಾಯಗೊಳಿಸಬಾರದು, ಈಗಾಗಲೇ ಪಿಎಫ್‌ ಕಚೇರಿಯಲ್ಲಿ ದಾಖಲಾಗಿರುವ ಹುಟ್ಟಿದ ದಿನಾಂಕವನ್ನು ಅಧಿಕೃತಗೊಳಿಸಬೇಕು. ಪಿಂಚಣಿದಾರರಿಗೆ ಸೌಲಭ್ಯ ಪಡೆಯುವ ನಿಯಮವನ್ನು ಸರಳೀಕರಣಗೊಳಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಸ್ಪಂದಿಸುವಂತೆ ಆಗ್ರಹಿಸಿ ಕಾರ್ಮಿಕ ಭವಿಷ್ಯನಿಧಿ ಕಚೇರಿಗೆ ಸಿಐಟಿಯು ನೇತೃತ್ವದಲ್ಲಿ ಮುತ್ತಿ ಹಾಕಲಾಯಿತು.

ಈ ವೇಳೆ ಕಾರ್ಮಿಕರನ್ನು ಉದ್ದೇಶಿಸಿ ಸಿಐಟಿಯು ಬೀಡಿ ಕಾರ್ಮಿಕರ ಫೆಡರೇಶನ್ ಅಧ್ಯಕ್ಷ ವಸಂತ ಆಚಾರಿ ಮಾತನಾಡಿ, ನವ ಉದಾರೀಕರಣ ನೀತಿಯನ್ನು ವೇಗವಾಗಿ ಜಾರಿ ಮಾಡುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕರ ಹಿತಾಸಕ್ತಿಗಿಂತಲೂ ಕಾರ್ಪೊರೇಟ್ ರಂಗದವರ ಹಿತಾಸಕ್ತಿಯನ್ನು ಕಾಪಾಡುತ್ತಿವೆ ಎಂದು ದೂರಿದರು.

ಸಾಮಾಜಿಕ ಭದ್ರತೆಯನ್ನು ಕೂಡಾ ಈ ಕಾರಣಕ್ಕಾಗಿ ನಾಶ ಮಾಡಲಾಗುತ್ತಿದೆ. ಸಾಮಾಜಿಕ ನ್ಯಾಯ ಎಂಬುದು ಗಗನ ಕುಸುಮವಾಗಿದೆ. ಅವಿದ್ಯಾವಂತರ ಸ್ಥಿತಿ ಚಿಂತಾಜನಕವಾಗಿದೆ. ಜೀವಿತ ಪ್ರಮಾಣಪತ್ರ ಪಡೆಯಲು ನಿವೃತ್ತ ಕಾರ್ಮಿಕರು ವಿಪರೀತ ಪರಿತಪಿಸುವಂತಾಗಿದೆ. ಕೆಲವು ಕಾರ್ಮಿಕರು ತಮಗೆ ನ್ಯಾಯೋಚಿತವಾಗಿ ಸಿಗಬೇಕಾದ ಪಿಂಚಣಿಯನ್ನು ಕೈಚೆಲ್ಲಿ ಸಾವಿನ ಬಾಗಿಲು ತಟ್ಟುವಂತಾಗಿದೆ. ಇದಕ್ಕೆ ಕೇಂದ್ರ ಸರ್ಕಾರವೇ ಕಾರಣವೆಂದು ಆರೋಪಿಸಿದರು.

ಅಲ್ಲದೆ, ಸಮಸ್ಯೆಗಳಿಗೆ ಪರಿಹಾರ ಸಿಗದೆ ಇಲ್ಲಿಂದ ಕದಲುವುದಿಲ್ಲವೆಂದು ಪಟ್ಟು ಹಿಡಿದರು. ಭವಿಷ್ಯನಿಧಿಯ ಅಧಿಕಾರಿಗಳು ಸಿಐಟಿಯು ಉನ್ನತ ಮಟ್ಟದ ನಿಯೋಗದೊಂದಿಗೆ ಸುಮಾರು 1 ಗಂಟೆ ತನಕ ಚರ್ಚೆಯಲ್ಲಿ ಪಾಲ್ಗೊಂಡು ಸಮಸ್ಯೆಗಳನ್ನು ಆಲಿಸಿ ಪರಿಹಾರವನ್ನು ಕಂಡುಕೊಳ್ಳುವ ಭರವಸೆ ನೀಡಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English