ಮೂಡುಬಿದಿರೆ: ಕಠಿಣ ಪರಿಶ್ರಮದಿಂದ ಸಾಧನೆ ಸಾಧ್ಯ. ಸಾಧನೆಗೆ ತಕ್ಕುದಾದ ಮನಸ್ಥಿತಿಯು ಮುಖ್ಯ. ವಿದ್ಯಾರ್ಥಿಗಳ ಸಾಧನೆ, ವ್ಯಕ್ತಿತ್ವ ಬೆಳವಣಿಗೆಗೆ ಅವರ ಪೋಷಕರು ಹಾಗೂ ಶಿಕ್ಷಕರು ಕೂಡ ತಮ್ಮದೇ ರೀತಿಯಲ್ಲಿ ಕೊಡುಗೆ ನೀಡುತ್ತಾರೆ ಎಂದು ಉಡುಪಿ ಎಂ.ಜಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಸಂಧ್ಯಾ ಆರ್ ನಂಬಿಯಾರ್ ಹೇಳಿದರು. ಆಳ್ವಾಸ್ ಕಾಲೇಜಿನ ಪದವಿ ಮತ್ತು ಸ್ನಾತಕೋತ್ತರ ವಿಭಾಗದ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಿದರು.
ಆಳ್ವಾಸ್ ವಿದ್ಯಾಸಂಸ್ಥೆ ವಿದಾರ್ಥಿಗಳಿಗೆ ಕಲಿಕೆಯ ಜೊತೆಗೆ ಸಾಂಸ್ಕøತಿಕ ಮತ್ತು ಕ್ರೀಡೆ ಇನ್ನಿತರ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ಸಾಧನೆ ಮಾಡಲು ಒತ್ತು ನೀಡುತ್ತಿರುವುದು ಶ್ಲಾಘನೀಯ ಎಂದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಮಾತನಾಡಿ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವವಿರಬೇಕು. ಉನ್ನತ ಶಿಕ್ಷಣ ಪಡೆಯುವುದರ ಜೊತೆಗೆ ಗುರು ಹಿರಿಯ ಬಗೆಗಿನ ಗೌರವವು ಹೆಚ್ಚಾಗಬೇಕು. ಸಾಮಾಜಿಕ ಜಾಲ ತಾಣಗಳಲ್ಲಿ ವಿದ್ಯಾರ್ಥಿಗಳು, ಯುವಜನತೆ ಹೆಚ್ಚು ತೊಡಗಿಸಿಕೊಳ್ಳುತ್ತಿರುವುದರಿಂದ ಅವರ ಮುಗ್ಧತೆ ಕಳೆದುಕೊಳ್ಳುತ್ತಿದ್ದಾರೆ ಎಂದರು.
ಕರ್ನಾಟಕ ರಾಜ್ಯ ಸರ್ಕಾರ ಕ್ರೀಡಾ ಸಾಧನೆಗಾಗಿ ಕೊಡಮಾಡುವ ಕ್ರೀಡಾ ರತ್ನ ಪ್ರಶಸ್ತಿ ವಿಜೇತರಾದ ಆತ್ಮಶ್ರೀ ಮತ್ತು ಯಶಸ್ವಿ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ವಿವಿಧ ರಂಗದಲ್ಲಿ ಸಾಧನೆಗೈದ 118 ವಿದ್ಯಾರ್ಥಿಗಳನ್ನು ಸಮಾರಂಭದಲ್ಲಿ ಅಭಿನಂದಿಸಲಾಯಿತು. ಕಳೆದ ಶೈಕ್ಷಣಿಕ ವರ್ಷದಲ್ಲಿ ಪದವಿ ಹಾಗೂ ಸ್ನಾತಕೋತ್ತರ ವಿಭಾಗದಲ್ಲಿ ಮಂಗಳೂರು ವಿಶ್ವವಿದ್ಯಾಲಯ ರ್ಯಾಂಕ್ ಪಡೆದ 46 ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ವಾರ್ಷಿಕ ವರದಿಯನ್ನು ಮಂಡಿಸಿದರು. ಇದೇ ಸಂದರ್ಭದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು. ಕಾರ್ಯಕ್ರಮವನ್ನು ಆಯನ ಜೋಶಿ ನಿರೂಪಿಸಿದರು.
Click this button or press Ctrl+G to toggle between Kannada and English