ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ ಯುವಕನೋರ್ವನನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಅನುಪಮ್ ಪಾಂಡೆ ಎಂಬಾತನೇ ಬಂಧಿತ ಯುವಕ.
ಸಂಸದೀಯ ಕ್ಷೇತ್ರ ವಾರಣಾಸಿಗೆ ತೆರಳಿದಾಗ ಪ್ರಧಾನಿ ಮೋದಿ ಅವರ ‘minute-to-minute programme’ ಬಗ್ಗೆ ಅನುಪಮ್ ಪಾಂಡೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದ ಎನ್ನಲಾಗಿದೆ. ಇದನ್ನು ಖಂಡಿಸಿ ಪ್ರಧಾನಿ ಮೋದಿ ಅವರಿಗೆ ಭದ್ರತೆ ಒದಗಿಸುವ ಎಸ್‌ಪಿಜಿ (Special Protection Group) ಉತ್ತರ ಪ್ರದೇಶ ಸರ್ಕಾರಕ್ಕೆ ದೂರು ನೀಡಿತ್ತು.
ಎಸ್‌ಪಿಜಿಯ ದೂರಿನ ಮೇರೆಗೆ ಅನುಪಮ್ ಪಾಂಡೆ ಅವರನ್ನು ಬಂಧಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಪ್ರಧಾನಿ ಮೋದಿ ಅವರ ಸೋಶಿಯಲ್ ಮೀಡಿಯಾ ತಂಡದಲ್ಲಿ ಪಾಂಡೆ ಕೆಲಸ ಮಾಡುತ್ತಿದ್ದಾರೆ. ಆದರೆ, ಅನಾರೋಗ್ಯದಿಂದ ಇತ್ತೀಚೆಗೆ ವಾರಣಾಸಿಗೆ ಬಂದಿದ್ದ ಎಂದು ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಗಮನಾರ್ಹ ಅಂಶವೆಂದರೆ ಪ್ರಧಾನಿ ಮೋದಿ ಅವರೇ ಸ್ವತಃ ಟ್ಟಿಟ್ಟರ್‌ನಲ್ಲಿ ಫಾಲೋ ಮಾಡುತ್ತಿರುವ 1,932 ವ್ಯಕ್ತಿಗಳ ಪೈಕಿ ಅನುಪಮ್ ಪಾಂಡೆ ಕೂಡ ಒಬ್ಬರು. ಪ್ರಧಾನಿ ಮೋದಿ ಅವರು ತಮ್ಮ ಕೈ ಕುಲುಕುತ್ತಿರುವ ಫೋಟೋವೊಂದನ್ನು 2015ರ ಜುಲೈ 2ರಂದು ಪಾಂಡೆ ಟ್ವೀಟ್ ಮಾಡಿದ್ದಾರೆ.
Click this button or press Ctrl+G to toggle between Kannada and English