ಬಿ.ಎಸ್.ಯಡಿಯೂರಪ್ಪ ವಿಚಾರಣೆಗೆ ಹೈಕೋರ್ಟ್ ತಡೆ

10:13 PM, Friday, September 30th, 2011
Share
1 Star2 Stars3 Stars4 Stars5 Stars
(3 rating, 1 votes)
Loading...

BS Yeddyurappa

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯ ನೀಡಿದ್ದ ಸಮನ್ಸ್‌ಗೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅದರೆ ಯಡಿಯೂರಪ್ಪ ವಿರುದ್ಧ ಇರುವ 2 ಮತ್ತು 3ನೇ ದೂರಿಗೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ ಪೀಠ ನೀಡಿರುವ ತಡೆಯಾಜ್ಞೆ ಪ್ರಶ್ನಿಸಲು ಸಿರಾಜಿನ್ ಬಾಷಾ ನಿರ್ಧರಿಸಿದ್ದಾರೆ.

ಸಿರಾಜಿನ್ ಪರ ವಕೀಲ ಹೇಮಂತ ರಾಜು ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಎಂದಿದ್ದಾರೆ. ಎರಡು ಮೂರು ದಿನಗಳಲ್ಲಿ ಪ್ರಕರಣದ ವಿಚಾರಣೆ ಬರುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

ಲೋಕಾಯುಕ್ತ ವಿಶೇಷ ನ್ಯಾಯಾಲಯವು ಅರಕೆರೆ, ಉತ್ತರಹಳ್ಳಿ ಡಿನೋಟಿಫಿಕೇಷನ್ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ 2ನೇ ದೂರಿನ ಆಧಾರದ ಮೇಲೆ ಆ.8ರಂದು ಸಮನ್ಸ್ ಜಾರಿ ಮಾಡಿತ್ತು.

ಸಿರಾಜಿನ್ ಬಾಷಾ ಸಲ್ಲಿಸಿರುವ ಮೂರನೇ ದೂರಿನ ವಿಚಾರಣಾ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ಮಧ್ಯಂತರ ತೀರ್ಪು ಸೆ.30ರಂದು ಪ್ರಕಟಗೊಳ್ಳಬೇಕಿತ್ತು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English