ನವದೆಹಲಿ : ಎಐಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಸಮಗ್ರ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಭಾರತವನ್ನು ಮುನ್ನಡೆಸಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.
84ನೇ ಕಾಂಗ್ರೆಸ್ ಸಮಗ್ರ ಅಧಿವೇಶನದ 2ನೇ ದಿನ ಮಾತನಾಡಿದ ಅವರು, ಭಾರತವನ್ನು ಒಗ್ಗೂಡಿಸಲು, ಮುನ್ನಡೆಸಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ದೇಶದ ಜನತೆ ಬಿಜೆಪಿ ಆಡಳಿತದಿಂದ ಬೇಸತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿಯವರು ಕೋಪವನ್ನು ಬಳಸುತ್ತಾರೆ, ನಾವು ಪ್ರೀತಿಯನ್ನು ಬಳಸೋಣ. ಇದೇ ನಮ್ಮ ಮತ್ತು ಬಿಜೆಪಿ ಮಧ್ಯೆ ಇರುವ ವ್ಯತ್ಯಾಸ ಎಂದರು.
ಬಲಿಷ್ಠ ಕ್ಷವನ್ನು ಕಟ್ಟಲು ಎದುರು ನೋಡುತ್ತಿದ್ದೇನೆ. ಪಕ್ಷದ ಸಿದ್ಧಾಂತಗಳನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಪಕ್ಷ ಕಷ್ಟಪಟ್ಟಿದೆ. ಯುವ ಜನಾಂಗದ ಸಲಹೆಗಳ ಜೊತೆ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಪಕ್ಷವನ್ನು ಕಟ್ಟುತ್ತೇನೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು. 8 ವರ್ಷಗಳ ಬಳಿಕ ಕಾಂಗ್ರೆಸ್ ಸಮಗ್ರ ಅಧಿವೇಶನವನ್ನು ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾ ಗಾಂಧಿ, ಪಿ.ಚಿದಂಬರಂ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಇನ್ನು ರಾಹುಲ್ ಗಾಂಧಿ ತಮ್ಮ ಟ್ವಿಟರ್ ಹೆಸರನ್ನು ಬದಲಾಯಿಸಿದ್ದಾರೆ. ಇಷ್ಟು ದಿನ ‘OfficeofRG’ ಎಂದಿದ್ದ ಟ್ವಿಟರ್ ಹ್ಯಾಂಡಲ್ ಇದೀಗ ‘RahulGandhi’ ಎಂದಾಗಿದೆ.
Click this button or press Ctrl+G to toggle between Kannada and English