ಮಂಗಳೂರು: ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ಸುಮಾರು 20ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಹಾಸ್ಟೆಲ್‌ನಲ್ಲಿದ್ದ ಕಾಲೇಜು ಸಿಬಂದಿ ಸೇರಿ ಯದ್ವಾತದ್ವಾ ಥಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಕಾಲೇಜಿನ ಪುಷ್ಪಗಿರಿ ಹಾಸ್ಟೆಲ್‌ನಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಸಿಬಂದಿ ಕೃತ್ಯ ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ಆರಂಭಿಸಿದ್ದಾರೆ. ಪರೀಕ್ಷೆ ಮುಗಿದ ಹಿನ್ನೆಲೆಯಲ್ಲಿ ಕೆಲವು ವಿದ್ಯಾರ್ಥಿಗಳು ಸೇರಿ ಹಾಸ್ಟೆಲ್‌ನಲ್ಲೇ ಸಂಭ್ರಮಾಚರಣೆ ನಡೆಸುತ್ತಿದ್ದರು. ಆದರೆ, ಇದಕ್ಕೆ ವಾರ್ಡನ್ ಮತ್ತು ಸಿಬಂದಿ ಆಕ್ಷೇಪ ವ್ಯಕ್ತಪಡಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಊಟದ ವಿಚಾರದಲ್ಲಿ ವಿದ್ಯಾರ್ಥಿಗಳು ಸಿಬ್ಬಂದಿಯನ್ನು ಪ್ರಶ್ನೆ ಮಾಡಿದ್ದರಂತೆ. ಇದೇ ನೆಪ ಇಟ್ಟುಕೊಂಡು ವಾರ್ಡನ್ ಮತ್ತು ಇತರ ಕಾಲೇಜು ಸಿಬಂದಿ ಸೇರಿ ರಾತ್ರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮತ್ತೊಬ್ಬ ವಿದ್ಯಾರ್ಥಿ ಆರೋಪಿಸಿದ್ದಾನೆ.
ವಿದ್ಯಾರ್ಥಿಗಳ ಮೇಲೆ ಥಳಿಸುವ ವಿಡಿಯೋವನ್ನು ವಿದ್ಯಾರ್ಥಿಗಳು ಮೊಬೈಲಿನಲ್ಲಿ ಚಿತ್ರೀಕರಿಸಿ, ಮಾಧ್ಯಮಕ್ಕೆ ನೀಡಿದ್ದಾರೆ. ಘಟನೆ ಬಗ್ಗೆ ವಿದ್ಯಾರ್ಥಿಗಳ ಹೆತ್ತವರು ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ.
Click this button or press Ctrl+G to toggle between Kannada and English