ರಾಹುಲ್‌ ಭೇಟಿಯಿಂದ ಪಕ್ಷಕ್ಕೆ ಬಲ… ದ.ಕ. 8 ಸ್ಥಾನಗಳಲ್ಲೂ ಗೆಲ್ಲುತ್ತೇವೆ: ಖಾದರ್‌‌‌‌‌‌

10:11 AM, Thursday, March 22nd, 2018
Share
1 Star2 Stars3 Stars4 Stars5 Stars
(5 rating, 1 votes)
Loading...

u-t-kaderಮಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ದಕ್ಷಿಣ ಕನ್ನಡ ಜಿಲ್ಲೆಗೆ ಬೇಟಿ ನೀಡಿದ್ದರಿಂದ ಪಕ್ಷಕ್ಕೆ ಬಲ ಬಂದಿದೆ. ಜಿಲ್ಲೆಯ ಎಂಟೂ ವಿಧಾನಸಭಾ ಕ್ಷೇತ್ರಗಳನ್ನು ಕಾಂಗ್ರೆಸ್ ಜಯಿಸಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಭೇಟಿಯಿಂದ ಕಾರ್ಯಕರ್ತರಲ್ಲಿ ಹುರುಪು ಬಂದಿದೆ. ಮಂಗಳವಾರ ನಡೆದ ಕಾರ್ಯಕ್ರಮ ಯಶಸ್ವಿಯಾಗಿದ್ದು, ಈಗ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ 7ರಲ್ಲಿ ಕಾಂಗ್ರೆಸ್ ಶಾಸಕರಿದ್ದು, ಈ ಸಲದ ಚುನಾವಣೆಯಲ್ಲಿ ಎಂಟೂ ಸ್ಥಾನಗಳಲ್ಲೂ ಕಾಂಗ್ರೆಸ್ ಗೆಲ್ಲಲಿದೆ ಎಂದರು.

ತೊಕ್ಕೊಟ್ಟು ಬಸ್ ನಿಲ್ದಾಣದಲ್ಲಿ ತೆರೆಯಲಾದ ಇಂದಿರಾ ಕ್ಯಾಂಟೀನ್‌‌ ಮಾ. 22ರಂದು ಸಂಜೆ ಉದ್ಘಾಟನೆಗೊಳ್ಳಲಿದೆ. ಗ್ರಾಹಕರ ಬೇಡಿಕೆಯನ್ನು ಮನ್ನಿಸಿ ಕ್ಯಾಂಟೀನ್‌ ಮೆನುವಿನಲ್ಲಿ ಬದಲಾವಣೆ ಮಾಡಲಾಗಿದೆ. ಬೆಳಗ್ಗಿನ ತಿಂಡಿಯ ಸಮಯದಲ್ಲೂ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು.

ಮಂಗಳವಾರ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಪಕ್ಷದ ಕಾರ್ಯಕರ್ತರು ಮಾಧ್ಯಮದವರಿಗೆ ತೊಂದರೆ ನೀಡಿರುವ ಬಗ್ಗೆ ಪತ್ರಕರ್ತರು ಅಸಮಾಧಾನ ವ್ಯಕ್ತಪಡಿಸಿದಾಗ, ಯಾರಿಂದಲೇ ಆಗಲಿ ಇಂತಹ ತೊಂದರೆಯಾಗಬಾರದು. ಇದಕ್ಕಾಗಿ ತಾನು ಕ್ಷಮೆಯಾಚಿಸುತ್ತೇನೆ ಎಂದರು.

ಉಳ್ಳಾಲದಲ್ಲಿ ಪಕ್ಷದ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್‌ ನಡೆಸಿರುವುದು ಸರಿಯಲ್ಲ. ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳ ಗಮನ ಸೆಳೆಯಲಾಗಿದೆ. ಅವರು ಸೂಕ್ತ ಕ್ರಮ ಜರಗಿಸುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.

ಕರಾವಳಿ ತಟ ರಕ್ಷಣಾ ದಳದಿಂದ ಮಂಗಳೂರಿನಲ್ಲಿ ರಾಷ್ಟ್ರೀಯ ತರಬೇತಿ ಅಕಾಡಮಿಯನ್ನು ಸ್ಥಾಪಿಸಲು 200 ಎಕರೆ ಜಮೀನು ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಹೇಳಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English