- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಡಾ| ಶಿವರಾಮ ಕಾರಂತ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ವನ್ಯಜೀವಿ ಸಪ್ತಾಹ 2011

wild life week at Pilikula [1]

ಮಂಗಳೂರು : ಡಾ| ಶಿವರಾಮ ಕಾರಂತ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ವನ್ಯಜೀವಿ ಸಪ್ತಾಹ 2011, ವನ್ಯಜೀವಿ ವಾಸಗೃಹಗಳ ಮತ್ತು ಕರ್ಣಾಟಕ ಬ್ಯಾಂಕ್‌ ವತಿಯಿಂದ ನಿರ್ಮಿಸಲಾದ ‘ವಿಶ್ರಾಂತಿ ಕುಟೀರ’ವನ್ನು ಶನಿವಾರ ಸಚಿವ ಜೆ. ಕೃಷ್ಣ ಪಾಲೆಮಾರ್‌ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಪಿಲಿಕುಳ ನಿಸರ್ಗಧಾಮಕ್ಕೆ ಅಪರೂಪದ ಹೊಸ ಪ್ರಾಣಿಗಳನ್ನು ತರಲು ಆದೇಶ ಮಂಜೂರಾಗಿದೆ. ಡಾ| ಶಿವರಾಮ ಕಾರಂತ ಪಿಲಿಕುಳ ಜೈವಿಕ ಉದ್ಯಾನವನ ವಿಸ್ತರಣೆ ಹಾಗೂ ಅಭಿವೃದ್ಧಿಗೆ ಸರಕಾರ 43 ಲಕ್ಷ ರೂ. ಮಂಜೂರು ಮಾಡಿದೆ ಎಂದು ಅವರು ತಿಳಿಸಿದರು.

ಜನರ ಸಹಕಾರದಿಂದ ವನ್ಯ ಜೀವ ಮತ್ತು ಪ್ರಕ್ರುತಿಯ ವೈವಿಧ್ಯತೆಯ ಉಳಿವು ಸಾಧ್ಯ. ಇಲ್ಲಿ ಮರಗಳ ಉಳಿವಿಗೆ ಜೀವ ವೈವಿಧ್ಯ ಮಂಡಳಿ ಕೆಲಸ ಮಾಡುತ್ತಿದೆ ಎಂದರು.

ಮುಖ್ಯ ಅತಿಥಿಯಾಗಿದ್ದ ಪಶ್ಚಿಮಘಟ್ಟ ಕಾರ್ಯಪಡೆ ಅಧ್ಯಕ್ಷ ಅನಂತ ಹೆಗ್ಡೆ ಮಾತನಾಡಿ ಜನ್ರು ಅರಣ್ಯ ಹಾಗೂ ವನ್ಯಜೀವಿಗಳ ಅಭಿವೃದ್ಧಿ ಹೆಸರಿನಲ್ಲಿ ನಾಶ ಮಾಡುತ್ತಿದ್ದಾರೆ. ನೈಸರ್ಗಿಕ ಸಂಪನ್ಮೂಲಗಳ ಉಳಿವಿಗಾಗಿ ಜನಾಂದೋಲನ ಹಮ್ಮಿಕೊಳ್ಳಬೇಕು ಎಂದರು.

ಮೂಡಬಿದ್ರೆ ಶಾಸಕ ಕೆ. ಅಭಯಚಂದ್ರ ಜೈನ್‌ ಅವರು ಅಧ್ಯಕ್ಷತೆ ವಹಿಸಿದ್ದರು. ವಿಧಾನಸಭಾ ಉಪಸಭಾಧ್ಯಕ್ಷ ಎನ್‌. ಯೋಗೀಶ್‌ ಭಟ್‌, ವಿಧಾನ ಪರಿಷತ್‌ ಸದಸ್ಯೆ ಭಾರತಿ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನಾಗರಾಜ ಶೆಟ್ಟಿ, ಕರ್ಣಾಟಕ ಬ್ಯಾಂಕ್‌ನ ಮಹಾಪ್ರಬಂಧಕ ಪಿ. ಜಯರಾಮ ಹಂದೆ, ತಾ.ಪಂ. ಸದಸ್ಯ ಹರೀಶ್‌ ಕೆ., ನಿವೃತ್ತ ಅರಣ್ಯ ಸೇವಾ ಅಧಿಕಾರಿ ಯು.ಟಿ. ಆಳ್ವ, ಪಶ್ಚಿಮ ಘಟ್ಟ ಕಾರ್ಯಪಡೆ ಸದಸ್ಯ ಗಜೇಂದ್ರ, ಮೂಡುಶೆಡ್ಡೆ ಗ್ರಾ.ಪಂ. ಅಧ್ಯಕ್ಷ ಉಮೇಶ್‌ ಜೆ. ಅವರು ಮುಖ್ಯ ಅತಿಥಿಗಳಾಗಿದ್ದರು. ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಎಚ್‌.ಜೆ. ಭಂಡಾರಿ, ಪ್ರೊ| ಕೆ.ವಿ. ರಾವ್‌ ಅವರು ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಡಾ| ಎನ್‌.ಎಸ್‌. ಚನ್ನಪ್ಪ ಗೌಡ ಅವರು ಸ್ವಾಗತಿಸಿದರು.