ಮಂಗಳೂರು: ಬಂಟ್ವಾಳ ನಂದಾವರ ದೇವಸ್ಥಾನದ ಪಕ್ಕ ನೇತ್ರಾವತಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಸಜೀಪಮುನ್ನೂರು ಗ್ರಾಮದ ರೈತ ಮುಖಂಡ, ಬಳಕೆದಾರರ ಹೋರಾಟಗಾರ ಶರತ್ ಕುಮಾರ್(45) ನಿಗೂಢವಾಗಿ ಸಾವನ್ನಪ್ಪಿದ್ದಾರೆ.
ಕಾಲು ಜಾರಿ ಬಿದ್ದು ಸಾವನ್ನಪ್ಪಿರಬೇಕು ಎಂದು ಶಂಕಿಸಲಾಗಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಾಗಿದೆ. ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿದ್ದ ಶರತ್, ತುಂಬೆ ವೆಂಟೆಡ್ ಡ್ಯಾಂ ಸಂತ್ರಸ್ತರ ಹೋರಾಟ, ಎತ್ತಿನಹೊಳೆ ಹೋರಾಟ, ಸ್ಥಳೀಯವಾಗಿ ಯುವಕ ಸಂಘಗಳಲ್ಲಿ ಮುಂಚೂಣಿಯಲ್ಲಿದ್ದರು.
ಸಾಮಾಜಿಕ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದು, ಆರ್.ಟಿ.ಐ. ಕಾರ್ಯಕರ್ತರಾಗಿಯೂ ಜನರೊಂದಿಗೆ ಬೆರೆಯುತ್ತಿದ್ದರು. ಅವರ ಅಕಾಲ ಮೃತ್ಯುವಿಗೆ ರೈತ ಸಂಘದ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದು, ಮೃತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.
Click this button or press Ctrl+G to toggle between Kannada and English