ಯಡಿಯೂರಪ್ಪ – ನಾನು ರಾಮ-ಲಕ್ಷ್ಮಣರಂತೇ ಸಹೋದರರು: ಈಶ್ವರಪ್ಪ

5:39 PM, Wednesday, March 28th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

eshwarappaಶಿವಮೊಗ್ಗ: ಕಳೆದ ಚುನಾವಣೆ ಸಂದರ್ಭದಲ್ಲಿ ಹಲವಾರು ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ ಅಹಿಂದ ವರ್ಗಕ್ಕೆ ದ್ರೋಹ ಎಸಗಿದೆ. ಬಿಜೆಪಿ ಸರ್ಕಾರ ಹಾಗೂ ಸಿದ್ದರಾಮಯ್ಯ ಸರ್ಕಾರ ಈ ವರ್ಗದ ಜನರಿಗೆ ಎಷ್ಟು ಅನುದಾನ ನೀಡಿದೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದರು.

ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಕಳೆದ ನಾಲ್ಕೂವರೆ ವರ್ಷ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಸಮಾಜದಲ್ಲಿ ಗೊಂದಲ ಮೂಡಿಸುವ ಅನೇಕ ಪ್ರಯತ್ನ ನಡೆಸಿದ್ದಾರೆ. ಹಿಂದುಳಿದ ಮತ್ತು ದಲಿತ ವರ್ಗಕ್ಕೆ ಅನ್ಯಾಯ ಎಸಗಿದ್ದಾರೆ ಎಂದು ದೂರಿದರು.

ಸಿದ್ದರಾಮಯ್ಯ ಮಠಮಾನ್ಯಗಳನ್ನ ಸ್ವಾಧೀನ ಪಡಿಸಿಕೊಳ್ಳಲು ಸಾಕಷ್ಟು ಪ್ರಯತ್ನಪಟ್ಟರು. ಶ್ರೀಕೃಷ್ಣನ ಮಠಕ್ಕೆ ಹೋಗುವುದಿಲ್ಲ, ಗೋಮಾಂಸ ತಿಂದಿದ್ದೇನೆ ಎನ್ನುವ ಬದಲು ಗೋ ಹತ್ಯೆಗೆ ನನ್ನ ಬೆಂಬಲವಿದೆ ಎಂದು ಜನರ ಮುಂದೆ ಹೇಳಲಿ ಎಂದು ತಾಕೀತು ಮಾಡಿದರು.

ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಆಂತರಿಕ ಸಮೀಕ್ಷೆ ನಡೆಯುತ್ತಿದೆ. ಶಿವಮೊಗ್ಗ ಸೇರಿದಂತೆ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲೂ ಸರ್ವೇ ಕಾರ್ಯ ಪೂರ್ಣಗೊಂಡ ನಂತರ ಗೆಲವು ಸಾಧಿಸುವ ಅಭ್ಯರ್ಥಿಗಳಿಗೆ ವರಿಷ್ಠರು ಟಿಕೆಟ್ ನೀಡಲಿದ್ದಾರೆ. ಶಿವಮೊಗ್ಗದಲ್ಲೂ ಹಲವಾರು ಆಕಾಂಕ್ಷಿಗಳಿದ್ದಾರೆ. ಯಾರಿಗೆ ಟಿಕೆಟ್ ನೀಡಿದರೂ ಅವರ ಗೆಲುವಿಗೆ ಶ್ರಮಿಸುತ್ತೇವೆ ಎಂದರು. ಇನ್ನು ಸಿಫೋರ್ ಸಂಸ್ಥೆ ನೀಡಿದ ಚುನಾವಣಾ ಪೂರ್ವ ಸಮೀಕ್ಷೆ ಸತ್ಯಾಂಶವಿಲ್ಲ ಉತ್ತರ ಪ್ರದೇಶದಲ್ಲಿ ಅದು ನೀಡಿದ ಮಾಹಿತಿ ಸುಳ್ಳಾಗಿತ್ತು. ಎರಡರಷ್ಟು ಸ್ಥಾನಗಳನ್ನು ಗೆದ್ದುಕೊಂಡಿದ್ದೆವು ಎಂದರು.

ಏ. 3 ರಂದು ಕಾಗಿನೆಲೆಯಲ್ಲಿ ಬೃಹತ್ ಅಹಿಂದ ವರ್ಗಗಳ ಸಮಾವೇಶ ನಡೆಸಲಾಗುತ್ತಿದೆ. ಸುಮಾರು 3 ರಿಂದ 5 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English