ರಾಷ್ಟ್ರಪಿತ ಮಹಾತ್ಮಗಾಂಧಿ ಅವರ 142ನೇ ಜನ್ಮದಿನವನ್ನು ದೇಶದೆಲ್ಲೆಡೆ ಸಂಭ್ರಮ ಸಡಗರದಿಂದ ಅಕ್ಟೋಬರ್ 2 ರಂದು ಆಚರಿಸಲಾಗುತ್ತಿದೆ. ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ನವದಹಲಿಯಲ್ಲಿರುವ ಗಾಂಧಿ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದರು. ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸೋನಿಯಾ ಗಾಂಧಿ ಮೊದಲ ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡರು. ಬಿಜೆಪಿ ಹಿರಿಯ ನಾಯಕ ಎಲ್. ಕೆ. ಆಡ್ವಾಣಿ, ದಹೆಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಸಹಿತ ಹಲವು ಗಣ್ಯರು ಸಹ ರಾಜ್‌ಘಾಟ್‌ನಲ್ಲಿ ಗಾಂಧಿ ಸಮಾಧಿಗೆ ಪುಷ್ಪಾರ್ಪಣೆ ಸಲ್ಲಿಸಿ ನಮನ ಸಲ್ಲಿಸಿದರು.
ಮೋಹನ್‌ದಾಸ್ ಕರಮ್ ಚಂದ್ ಗಾಂಧಿ 1969ರ ಅಕ್ಟೋಬರ್ 2ರಂದು ಜನಿಸಿದ್ದಾರೆ. ಅಹಿಂಸೆಯ ಶಾಂತಿ ಮಂತ್ರದಿಂದ ಬ್ರಿಟಿಷರನ್ನು ದೇಶದಿಂದ ತೊಲಗಿಳಿಸಿ. 1947 ಆಗೋಸ್ಟ್ 15ರಂದು ಭಾರತದ ಸ್ವಾತಂತ್ರ್ಯ ಕನಸು ನನಸಾಗುವಂತೆ ಮಾಡಿದರು. ಇಂದು ವಿಶ್ವದ್ಯಾಂತ ‘ಮಹಾತ್ಮಗಾಂಧಿ’ ಜನ್ಮದಿನವನ್ನು ‘ಅಂತರಾಷ್ಟ್ರೀಯ ಅಹಿಂಸಾ ದಿನ’ವನ್ನಾಗಿ ಆಚರಿಸಲಾಗುತ್ತಿದೆ.
Click this button or press Ctrl+G to toggle between Kannada and English