ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಹಿರಿಯ ಹೋರಾಟಗಾರ ಅಣ್ಣಾ ಹಜಾರೆ ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.
ಲೋಕಪಾಲರ ನೇಮಕ ಮತ್ತು ರೈತರ ಬೆಳೆಗಳಿಗೆ ಸೂಕ್ತ ದರ ನಿಗದಿ ಮಾಡಬೇಕು ಹಾಗೂ ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಅಣ್ಣಾ ಹಜಾರೆ ಒತ್ತಾಯಿಸಿದ್ದರು. ಈ ಸಂಬಂಧ ಇದೇ 23ರಿಂದ ರಾಮ್ಲೀಲಾ ಮೈದಾನದಲ್ಲಿ ಅವರು ಅನಿರ್ಧಿಷ್ಟಾವಧಿಯ ಉಪವಾಸ ಸತ್ಯಾಗ್ರಹ ಶುರು ಮಾಡಿದ್ದರು.
ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್ ಹಾಗೂ ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವ ಗಜೇಂದ್ರ ಸಿಂಗ್ ಸೇಖಾವಾತ್ ರಾಮ್ಲೀಲಾ ಮೈದಾನಕ್ಕೆ ತೆರಳಿ ಅಣ್ಣಾ ಹಜಾರೆ ಅವರ ಜೊತೆ ಮಾತುಕತೆ ನಡೆಸಿದರು. ಈ ಮಾತುಕತೆ ನಂತರ ಅಣ್ಣಾ ಹಜಾರೆ ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದರು.
Click this button or press Ctrl+G to toggle between Kannada and English