ಬೇಡಿಕೆ ಈಡೇರಿಕೆಗೆ ಆಗ್ರಹ… ಮತ್ತೆ ಉಪವಾಸ ಕುಳಿತ ಸುದತ್ತ ಜೈನ್

11:16 AM, Friday, March 30th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

suddath-jainಮಂಗಳೂರು: ಕಾರ್ಮಿಕರ ಆಸ್ಪತ್ರೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು 97 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದ ಅಖಿಲ ಭಾರತ ಕಾರ್ಮಿಕ ಸಂಘದ ಸ್ಥಾಪಕ ಅಧ್ಯಕ್ಷ ಸುದತ್ ಜೈನ್ ಅವರು ಈಗ ಮತ್ತೆ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ.

ಬದುಕು, ಬದುಕಲು ಬಿಡು’ ಘೋಷಣೆಯಡಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಮಹಾವೀರ ಜಯಂತಿಯಂದು ಮತ್ತೆ ಉಪವಾಸ ಸತ್ಯಾಗ್ರಹ ಆರಂಭಿಸಿದರು. ಆರೋಗ್ಯ ಭದ್ರತೆ, ವೇತನ ಭದ್ರತೆ, ಉದ್ಯೋಗ ಭದ್ರತೆ, ವಾಸ್ತವ್ಯ ಭದ್ರತೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಂತೆ ಒತ್ತಾಯಿಸಿ ಈ ಸತ್ಯಾಗ್ರಹ ನಡೆಸುತ್ತಿರುವುದಾಗಿ ಅವರು ಸತ್ಯಾಗ್ರಹ ಸ್ಥಳದಲ್ಲಿ ತಿಳಿಸಿದ್ದಾರೆ.

ಮೂಡುಬಿದಿರೆಯ ಶಿತ್ರಾಡಿ ಪಂಚಾಯ್ತಿಯಲ್ಲೇ ಸುಮಾರು 500 ಮನೆಗಳಿಗೆ ಹಕ್ಕು ಪತ್ರ ಸಿಕ್ಕಿಲ್ಲ. ಇದೇ ರೀತಿ ಸರ್ಕಾರದ ಸವಲತ್ತುಗಳನ್ನು ಫಲಾನುಭವಿಗಳಿಗೆ ತಲುಪಿಸುತ್ತಿಲ್ಲ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ನಿಟ್ಟಿನಲ್ಲಿ ಅಸಡ್ಡೆ ಧೋರಣೆ ತಳೆಯುತ್ತಿದ್ದಾರೆ ಎಂದು ಈ ವೇಳೆ ಆರೋಪಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English