ದೇಶವನ್ನು ಬಲಿಷ್ಠಗೊಳಿಸುವುದೇ ನನ್ನ ಗುರಿ: ನೌಹೀರಾ ಶೇಕ್

1:38 PM, Friday, March 30th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

nouhera-shiekhಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಕಂಡ ಕನಸನ್ನು ನನಸು ಮಾಡುವುದರ ಮೂಲಕ ಭಾರತವನ್ನು ಬಲಿಷ್ಠ ರಾಷ್ಟ್ರವನ್ನಾಗಿ ರೂಪಿಸುವುದೇ ತಮ್ಮ ಗುರಿಯಾಗಿದೆ ಎಂದು ಎಂಇಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಡಾ. ನೌಹೀರಾ ಶೇಕ್ ಹೇಳಿದ್ದಾರೆ.

ಮುರುಗೇಶ್ ಪಾಳ್ಯದಲ್ಲಿ ದಲಿತ ಸಂಘರ್ಷ ಸಮಿತಿ ಹಾಗೂ ನಾರ್ತ್ ಈಸ್ಟ್ ಪೀಪಲ್ಸ್ ವಾಯ್ಸ್ ಜಂಟಿಯಾಗಿ ಆಯೋಜಿಸಿದ್ದ ಜನಶಕ್ತಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಎಲ್ಲ ಭಾರತೀಯರು ತಲೆ ಎತ್ತಿ ಗೌರವ, ಸ್ವಾಭಿಮಾನದಿಂದ ಬದುಕಬೇಕು ಎಂಬುದೇ ಅಂಬೇಡ್ಕರ್ ಅವರ ಆಶಯವಾಗಿತ್ತು.

ಆದರೆ ಇಂದು ಅಂಬೇಡ್ಕರ್ ಹಾಕಿಕೊಟ್ಟ ಮಾರ್ಗದಲ್ಲಿ ದೇಶ ಸಾಗದದಿರುವುದರಿಂದ ಅಸಮಾನತೆ, ಮೇಲೂ- ಕೀಳು ಎಂಬ ತಾರತಮ್ಯದಿಂದ ಬಳಲುತ್ತಿದೆ ಎಂದು ವಿಷಾಧ ವ್ಯಕ್ತಪಡಿಸಿದರು.

ಅಂಬೇಡ್ಕರ್ ಕೊಟ್ಟ ಸಂವಿಧಾನ ಕೇವಲ ಪುಸ್ತಕವಲ್ಲ ಎಲ್ಲ ಭಾರತೀಯರ ಪಾಲಿಗೆ ಭಗವದ್ಗೀತೆ, ಬೈಬಲ್ ಹಾಗೂ ಕುರಾನ್‌ ಇದ್ದ ಹಾಗೇ ಎಂದು ಗುಣಗಾನ ಮಾಡಿದರು. ಎಲ್ಲ ಭಾರತೀಯರು ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕಾದದ್ದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English