ಸರಕು ಮತ್ತು ಸೇವಾ ತೆರಿಗೆ ಕುರಿತು ಉಪನ್ಯಾಸ

5:33 PM, Friday, March 30th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

alwas-newsಮೂಡಬಿದಿರೆ: ಆಳ್ವಾಸ್ ಕಾಲೇಜಿನ ವಾಣಿಜ್ಯ ವಿಭಾಗ, ಕನ್ನಡ ವಿಭಾಗ ಮತ್ತು ಪ್ರಸಾರಾಂಗ ಮಂಗಳೂರು ವಿಶ್ವವಿದ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ `ಸರಕು ಮತ್ತು ಸೇವಾ ತೆರಿಗೆ’ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮಕ್ಕೆ ಉಪನ್ಯಾಸಕರಾಗಿ ಆಗಮಿಸಿದ್ದ ಮಂಗಳೂರು ವಿಶ್ವವಿದ್ಯಾಲಯದ ವ್ಯವಹಾರ ಮತ್ತು ಆರ್ಥಿಕ ವಿಭಾಗದ ಮುಖ್ಯಸ್ಥ ಪ್ರೊ. ಮಲ್ಲಿಕಾರ್ಜುನ ಮಾತನಾಡಿ ಇತ್ತೀಚೆಗೆ ತೆರಿಗೆ ಕ್ಷೇತ್ರದಲ್ಲಿನ ಬದಲಾವಣೆ ಕೆಲವರಲ್ಲಿ ಗೊಂದಲಗಳನ್ನು ಹುಟ್ಟು ಹಾಕಿದೆ. ಜಿಎಸ್‍ಟಿ ಯನ್ನು ಅರ್ಥೈಸಿಕೊಳ್ಳುವುದು ಬಹಳ ಕ್ಲಿಷ್ಟಕರ ಎನ್ನುವುದು ಸಾಮಾನ್ಯರ ಕಲ್ಪನೆಯಾಗಿದೆ.ಜಿ.ಎಸ್.ಟಿ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸುವಲ್ಲಿ ಒಂದು ಮಹತ್ವದ ಹೆಜ್ಜೆ.ಇದರ ಹಿಂದೆ ಅಸಾಧರಣ ದುಡಿವ ಶಕ್ತಿಗಳಿವೆ. ಇದನ್ನರಿತುಕೊಂಡು ಸಾಮಾನ್ಯರು ಸಹಕರಿಸಿಕೊಂಡು ಹೋಗಬೇಕಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಮಂಗಳೂರು ವಿಶ್ವ ವಿದ್ಯಾಲಯದ ಪ್ರಸಾರಾಂಗ ಪ್ರಚಾರೋಪನ್ಯಾಸ ಮಾಲಿಕೆಯ ಸಂಚಾಲಕ ಧನಂಜಯ ವಿ.ವಿ ಪ್ರಸಾರಾಂಗದ ಕಾರ್ಯಚಟುವಟಿಕೆಗಳು ಹಾಗು ಪ್ರಚಾರೋಪನ್ಯಾಸದ ಔಚಿತ್ಯದ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮವನ್ನು ಪ್ರಗತಿ ಜಿ ಬಿ ನಿರೂಪಿಸಿದರು. ಕನ್ನಡ ವಿಭಾಗದ ಉಪನ್ಯಾಸಕ ಚಂದ್ರಶೇಖರ್ ಗೌಡ, ಉಪನ್ಯಾಸಕ ಡಾ ಯೋಗಿಶ್ ಕೈರೋಡಿ, ಉಪನ್ಯಾಸಕಿ ಛಾಯಾ ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English