ಗೋಹಂತಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಅಮರಣಾಂತ ಉಪವಾಸ

10:34 AM, Monday, April 2nd, 2018
Share
1 Star2 Stars3 Stars4 Stars5 Stars
(No Ratings Yet)
Loading...

protestಮಂಗಳೂರು: ತಾಲೂಕಿನ ಮುಡಿಪು ವಲಯದ ಕೈರಂಗಳ‌ಪುಣ್ಯಕೋಟಿ ನಗರದ ಅಮೃತಧಾರಾ ಶಾಲೆಯಿಂದ ಇತ್ತೀಚೆಗೆ ನಡೆದ ದನ ದರೋಡೆ ಪ್ರಕರಣ ಖಂಡಿಸಿ ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಅಮರಣಾತ ಉಪವಾಸ ಸತ್ಯಾಗ್ರಹ ಆರಂಭವಾಗಿದೆ.

ಅಮೃತಧಾರಾ ಗೋಶಾಲೆ ಸಮಿತಿ ಅಧ್ಯಕ್ಷ ಟಿ.ಜಿ. ರಾಜಾರಾಮ ಭಟ್ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದು, ಪರಿಸರದ ಗೋಪ್ರೇಮಿಗಳು ಬೆಂಬಲ‌ ಸೂಚಿಸಿ ಧರಣಿ ಕುಳಿತಿದ್ದಾರೆ. ಗೋಕಳ್ಳರನ್ನು ಬಂಧಿಸಿ, ಅವರು ತಪ್ಪೊಪ್ಪಿಕೊಳ್ಳುವ ತನಕ ಸತ್ಯಾಗ್ರಹದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ‌ವೆಂದು ಧರಣಿನಿರತರು ಘೋಷಿಸಿದ್ದಾರೆ.

ಈ ಮೂಲಕ ಗೋಕಳ್ಳರಿಗೆ ಎಚ್ಚರಿಕೆ ಸಂದೇಶ ತಲುಪಿಸಲಾಗುವುದು. ಸತ್ಯಾಗ್ರಹಕ್ಕೆ ಸೂಕ್ತ ಸ್ಪಂದನೆ ವ್ಯಕ್ತವಾಗದಿದ್ದಲ್ಲಿ ನಾಳೆಯಿಂದ ಸರಣಿ ಧರಣಿ ಮೂಲಕ ಪ್ರತಿಭಟನೆ ತೀವ್ರಗೊಳಿಸಲಾಗುವುದು. ಈ ಹಿಂದೆ ದುಷ್ಕರ್ಮಿಗಳಿಂದ ದನಗಳನ್ನು ಕಳೆದುಕೊಂಡಿರುವ ಸಂತ್ರಸ್ತರನ್ನೂ ಕರೆತಂದು ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಇದು ಸಾಮಾಜಿಕ ಆಂದೋಲನ, ಯಾವುದೇ ಜಾತಿ ಧರ್ಮದ ವಿರುದ್ಧ ಅಲ್ಲ. ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಮತಾಂಧರು, ಗಾಂಜಾ ವ್ಯಸನಿಗಳು ಇಂತಹ ಕೃತ್ಯಗಳಲ್ಲಿ ತೊಡಗಿದ್ದಾರೆ ಎಂದು ರಾಜಾರಾಮ ಭಟ್ ಹೇಳಿದರು.

ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸಂತೋಷ್ ಕುಮಾರ್ ರೈ, ತಾ‌.ಪಂ. ಸದಸ್ಯ ನವೀನ್ ಪಾದಲ್ಪಾಡಿ, ಅಮ್ಮೆಂಬಳ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಜಯರಾಮ ಶೆಟ್ಟಿ ಕಂಬಳಪದವು, ಜಗದೀಶ ಆಳ್ವ ಕುವೆತ್ತಬೈಲು, ಕೊಣಾಜೆ ಶಂಕರ ಭಟ್ ಸೇರಿದಂತೆ ಪ್ರಮುಖರು ಹಾಜರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English