ಫೋಟೊ ಯಡವಟ್ಟು… ರವಿಶಂಕರ್‌ ಪ್ರಸಾದ್‌, ಬಿಎಸ್‌ವೈ, ಶೋಭಾ ವಿರುದ್ಧ ಪ್ರತಿಭಾ ದೂರು

10:10 AM, Tuesday, April 3rd, 2018
Share
1 Star2 Stars3 Stars4 Stars5 Stars
(5 rating, 1 votes)
Loading...

prathiba-kulaiಮಂಗಳೂರು: ಬೆಂಗಳೂರಿನಲ್ಲಿ ಭಾನುವಾರ ಬಿಡುಗಡೆಗೊಳಿಸಿದ್ದ ಕಾಂಗ್ರೆಸ್ ವಿರುದ್ಧದ ಬಿಜೆಪಿ ಚಾರ್ಜ್‌ ಶೀಟ್‌‌ನಲ್ಲಿ ತನ್ನ ಫೋಟೊ ಹಾಕಿ ವಿನಾಕಾರಣ ಮಾನಸಿಕ ಹಿಂಸೆ ನೀಡಿರುವುದಾಗಿ ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ಪ್ರತಿಭಾ ಕುಳಾಯಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಇಂದು ಪ್ರತಿಭಾ ಕುಳಾಯಿ ದೂರು ನೀಡಿದ್ದಾರೆ.

ಬಿಜೆಪಿ ಬಿಡುಗಡೆಗೊಳಿಸಿದ್ದ ಚಾರ್ಜ್‌ಶೀಟ್‌ನಲ್ಲಿ `ಬಿಬಿಎಂಪಿಯಲ್ಲಿ ಮುಖ್ಯಮಂತ್ರಿ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಜೆಡಿಎಸ್ ಪಾಲಿಕೆ ಸದಸ್ಯೆ ಮಂಜುಳಾ ನಾರಾಯಣ ಸ್ವಾಮಿ ಸೀರೆಯನ್ನು ಎಳೆದಾಡಿದ್ದು ಕಾಂಗ್ರೆಸ್ ನೆರಳಲ್ಲಿ ದುರುಳರ ಉಪಟಳ ಎಷ್ಟು ಹೆಚ್ಚಿದೆ ಎಂಬುದಕ್ಕೆ ನಿದರ್ಶನವಾಗಿದೆ. ಬಿಜೆಪಿ ಪಾಲಿಕೆ ಸದಸ್ಯೆ ಮಮತಾ ವಾಸುದೇವ್ ಅವರಿಗೆ ದಿನನಿತ್ಯ ಕಿರುಕುಳ ನೀಡಲಾಗುತ್ತಿದೆ. ಸುಳ್ಳು ಮೊಕದ್ದಮೆ ಹೂಡಿ ಅವರನ್ನು ಮಾನಸಿಕವಾಗಿ ಕುಗ್ಗಿಸುವ ಕುತಂತ್ರ ನಡೆಯುತ್ತಿದೆ.

ಮಹಿಳಾ ಸಬಲೀಕರಣದ ಬಗ್ಗೆ ಭಾಷಣ ಬಿಗಿಯುವ ಕಾಂಗ್ರೆಸ್ ಮುಖಂಡರಿಗೆ ತಮ್ಮದೇ ಶಾಸಕ, ಮಹಿಳಾ ಜನಪ್ರತಿನಿಧಿಗಳಿಗೆ ನೀಡುತ್ತಿರುವ ಕಿರುಕುಳ ಕಾಣುವುದಿಲ್ಲ’ ಎಂಬ ಹೇಳಿಕೆಯನ್ನು ಪ್ರಕಟಿಸಲಾಗಿದೆ. ಈ ಹೇಳಿಕೆಗೆ ನನ್ನ ಫೋಟೊವನ್ನು ಹಾಕಿ ನನಗೆ ಮಾನಸಿಕ ಹಿಂಸೆ ನೀಡಲಾಗಿದೆ ಎಂದು ಪ್ರತಿಭಾ ಕುಳಾಯಿ ಪೊಲೀಸ್ ಆಯುಕ್ತರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ನನಗೆ ಸಂಬಂಧಪಡದ ವಿಷಯದಲ್ಲಿ ನನ್ನ ಫೋಟೊ ಹಾಕಿ ನನಗೆ ವಿವಿಧ ಹೇಳಿಕೆಗಳನ್ನು ಪ್ರಕಟಿಸುವ ಮೂಲಕ ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿ ಹಾಗೂ ಅದರ ನಾಯಕರು ಅವಮಾನ ಮಾಡಿದ್ದಾರೆ ಎಂದು ಪ್ರತಿಭಾ ಕುಳಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English