ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಅಗತ್ಯವಿಲ್ಲ: ಜಿಲ್ಲಾಧಿಕಾರಿ

10:31 AM, Tuesday, April 3rd, 2018
Share
1 Star2 Stars3 Stars4 Stars5 Stars
(No Ratings Yet)
Loading...

sesikanth-senthilಮಂಗಳೂರು: ವಿಧಾನಸಭಾ ಚುನಾವಣಾ ನೀತಿ ಸಂಹಿತಿ ಜಾರಿಯಲ್ಲಿದ್ದರೂ, ಖಾಸಗಿ ಸ್ಥಳಗಳಲ್ಲಿ ನಡೆಯುವ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಪಡೆಯಲು ಸಾರ್ವಜನಿಕರು ಅರ್ಜಿ ಸಲ್ಲಿಸಬೇಕಾದ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಚುನಾವಣಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮದುವೆ, ಹುಟ್ಟುಹಬ್ಬ ಆಚರಣೆ ಸೇರಿದಂತೆ ರಾಜಕೀಯ ಉದ್ದೇಶವಿಲ್ಲದ ಖಾಸಗಿ ಕಾರ್ಯಕ್ರಮಗಳಿಗೆ ಚುನಾವಣಾಧಿಕಾರಿಗಳ ಅನುಮತಿ ಪಡೆಯಬೇಕಾಗಿಲ್ಲ. ಆದರೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಖಾಸಗಿ ಕಾರ್ಯಕ್ರಮಗಳಾದರೆ ಧ್ವನಿವರ್ಧಕ ಸೇರಿದಂತೆ ನಿಯಮಾನುಸಾರ ಪಡೆಯಬೇಕಾದ ಅನುಮತಿಗಳನ್ನು ಪಡೆಯಲೇಬೇಕು ಎಂದು ಹೇಳಿದರು.

ಅಲ್ಲದೇ, ಯಕ್ಷಗಾನ ಸೇರಿದಂತೆ ರಾಜಕೀಯೇತರ ಸಾರ್ವಜನಿಕ ಕಾರ್ಯಕ್ರಮಗಳ ಆಯೋಜಕರು ಸದರಿ ಕಾರ್ಯಕ್ರಮವನ್ನು ಯಾವುದೇ ರಾಜಕೀಯ ಉದ್ದೇಶಕ್ಕೆ ನಡೆಸುತ್ತಿಲ್ಲ ಎಂದು ಡಿಕ್ಲರೇಷನ್‌‌ನ್ನು ದಾಖಲೆಯೊಂದಿಗೆ ಚುನಾವಣಾಧಿಕಾರಿಗಳಿಗೆ ಅಥವಾ ಸ್ಥಳೀಯ ನಗರ ಸ್ಥಳೀಯ ಸಂಸ್ಥೆ/ಗ್ರಾ.ಪಂ. ಅಥವಾ ಪೊಲೀಸ್ ಠಾಣೆಗೆ ಸಲ್ಲಿಸಬೇಕು. ಅನುಮತಿ ಪಡೆಯಲು ಅರ್ಜಿ ಸಲ್ಲಿಸಬೇಕಾಗಿಲ್ಲ ಎಂದು ಜಿಲ್ಲಾಧಿಕಾರಿಗಳು ವಿವರಿಸಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English