ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯುವ ಬಗ್ಗೆ ನನಗೆ ಅನುಮಾನವಿದೆ. ರಾಜ್ಯ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ಕಡಿವಾಣ ಹಾಕಿ ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಚುನಾವಣಾ ಆಯಕ್ತ ಓ.ಪಿ ರಾವತ್‌ಗೆ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಮನವಿ ಮಾಡಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ಅವರನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ ಮಾಡಿದರು. ರಾಜ್ಯದಲ್ಲಿನ ಪ್ರಸ್ತುತ ಪರಿಸ್ಥಿತಿ ಕುರಿತು, ಸರ್ಕಾರ ನಡೆಸುತ್ತಿರುವ ಚುನಾವಣಾ ಅಕ್ತಮ ಸಂಬಂಧ ಆರು ದೂರುಗಳನ್ನು ಸಲ್ಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡರು, ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾವತ್ ಅವರನ್ನು ಮತ್ತು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ. ಸರ್ಕಾರದ ಕೆಲವು ಅಧಿಕಾರಿಗಳ ನಡವಳಿಕೆ ಬಗ್ಗೆ ಚುನಾವಣ ಆಯೋಗದ ಗಮನಕ್ಕೆ ತಂದಿದ್ದೇನೆ. ಚುನಾವಣಾ ಪ್ರಕ್ರಿಯೆ ಪಾರದರ್ಶಕವಾಗಿರಬೇಕು, ಆದರೆ ಈ ಬಗ್ಗೆ ನನಗೆ ಅನುಮಾನ ಇದೆ ಅಂಥ ಹೇಳಿರುವುದಾಗಿ ತಿಳಿಸಿದರು.
ನಿಷ್ಠಾವಂತ ಅಧಿಕಾರಿಗಳನ್ನು ಸರ್ಕಾರ ಬದಲಾವಣೆ ಮಾಡಿದೆ. ಸೂಪರ್ ಹೋಮ್ ಮಿನಿಸ್ಟರ್ ಅವರನ್ನು ಯಾವಾಗ ತೆಗೆದಿದೆ ಸರ್ಕಾರ? ಕೆಂಪಯ್ಯ ಅವರ ಆಫೀಸ್ ವಿಕಾಸಸೌಧದಿಂದ ತೆಗೆಯಲಾಗಿದೆ. ಆದರೆ ಬೇರೆ ಕಡೆ ಅವರ ಆಫೀಸ್ ಶಿಫ್ಟ್ ಆಗಿದೆ ಎಂದು ಆರೋಪಿಸಿದ ದೇವೇಗೌಡರು ಈ ಬಗ್ಗೆ ಆಯೋಗದ ಗಮನಕ್ಕೆ ತರಲಾಗಿದೆ ಎಂದರು.
ಸಿಎಂ ಕಚೇರಿಯ ಸಿಬ್ಬಂದಿ, ಅಧಿಕಾರಿಗಳು ಚುನಾವಣೆಗಾಗಿ ದುಡ್ಡು ಸಂಗ್ರಹಿಸುತ್ತಿರುವುದು, ರಾಮನಗರ, ಹಾಸನ, ಮಂಡ್ಯ, ಮೈಸೂರು ಭಾಗಗಳಲ್ಲಿ ತಮಗೆ ಬೇಕಾದ ಅಧಿಕಾರಿಗಳನ್ನು ವರ್ಗ ಮಾಡಿರುವುದು, ಪೊಲೀಸ್ ಜೀಪ್‌ಗಳಲ್ಲಿ ಹಣ ಸಾಗಿಸುತ್ತಿರುವುದು ಗೃಹ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು, ಗೃಹ ಇಲಾಖೆಯಲ್ಲಿ ಕೆಂಪಯ್ಯ ಅವರ ಕೈ ಚಳಕದ ಬಗ್ಗೆ ಆಯೋಗಕ್ಕೆ ಮಾಹಿತಿ ನೀಡಿದ್ದೀನಿ ಮತ್ತು ಡಿಸಿ ಹಾಗೂ ಎಸ್‌ಪಿಗಳನ್ನು ಸ್ವೇಚ್ಛಾಚಾರವಾಗಿ ವರ್ಗಾವಣೆ ಮಾಡಿದ್ದಾರೆ ಎನ್ನುವುದನ್ನು ಆಯೋಗದ ಗಮನಕ್ಕೆ ತಂದಿದ್ದೇನೆ ಎಂದು ವಿವರಿಸಿದರು.
Click this button or press Ctrl+G to toggle between Kannada and English