- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಬಂಟ್ವಾಳದಲ್ಲಿ 71ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Bantwala Congress [1]ಬಂಟ್ವಾಳ: ಬಂಟ್ವಾಳ ಕ್ಷೇತ್ರ ವ್ಯಾಪ್ತಿಯ ಸಂಗಬೆಟ್ಟುವಿನಲ್ಲಿ 71 ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಸಿದ್ಧಕಟ್ಟೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡರು. ಸಚಿವ ರಮಾನಾಥ್ ರೈ ಅವರು ಕಾರ್ಯಕರ್ತರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಇತ್ತೀಚೆಗೆ ಕಾಂಗ್ರೆಸ್ ನಲ್ಲಿದ್ದ ಮುಖಂಡ ಪ್ರಭಾಕರ್ ಪ್ರಭು ಬಿಜೆಪಿ ಸೇರ್ಪಡೆಗೊಂಡಿದ್ದರು. ಇದಕ್ಕೆ ತಿರುಗೇಟು ನೀಡಿದ ಕಾಂಗ್ರೆಸ್ 71ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರನ್ನು ತನ್ನತ್ತ ಸೆಳೆದುಕೊಂಡಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.